ಮುಂದಿನ ದಿನಗಳಲ್ಲಿ ದೇಶದಲ್ಲಿನ ಎಲ್ಲ ಮದರಸಾಗಳನ್ನು ಮುಚ್ಚುವ ಕೆಲಸ ಮಾಡುತ್ತೇವೆ: ಬಿಸ್ವಾಸ್ ಶರ್ಮಾ
Friday, March 17, 2023
ಬೆಳಗಾವಿ: ಮುಂದಿನ ದಿನಗಳಲ್ಲಿ ದೇಶದಲ್ಲಿನ ಎಲ್ಲ ಮದರಸಾಗಳನ್ನು ಮುಚ್ಚುವ ಕೆಲಸ ಮಾಡುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಡಾ.ಹೀಮಂತ್ ಬಿಸ್ವಾಸ್ ಶರ್ಮಾ ಹೇಳಿದ್ದಾರೆ.
ಗುರುವಾರ ಬೆಳಗಾವಿಯ ಶಹಾಪುರದ ಕಪಿಲೇಶ್ವರ ಕಾಲನಿಯಲ್ಲಿ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ಬೆಳಗಾವಿ ದಕ್ಷಿಣ ಶಾಸಕರ ಅನುದಾನದಡಿ ನಿರ್ಮಿಸಿರುವ ‘ಶಿವ ಚರಿತ್ರೆ ಸ್ಮಾರಕ’ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ದೇಶಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ, ಬರುವ ದಿನಗಳಲ್ಲಿ ಮುಚ್ಚುತ್ತೇವೆ ಎಂದರು.
ದೇಶದ ಇತಿಹಾಸವನ್ನು ತಿರುಚಿ, ಒಡೆದು ಆಳುವ ನೀತಿ ಅನುಸರಿಸುತ್ತಲೇ ಬಂದಿರುವ ಕಾಂಗ್ರೆಸ್ ಇಂದಿನ ತಲೆಮಾರಿನ ಮೊಘಲರು. ದೇಶಕ್ಕೆ ಮದರಸಾಗಳ ಅವಶ್ಯಕತೆ ಇಲ್ಲ, ನಮಗೆ ಶಾಲೆ, ಕಾಲೇಜು, ವಿಶ್ವವಿದ್ಯಾಲಯಗಳ ಅವಶ್ಯಕತೆ ಇದೆ. ಹಾಗಾಗಿ ಬರುವ ದಿನಗಳಲ್ಲಿ ದೇಶದಲ್ಲಿನ ಎಲ್ಲ ಮದರಸಾಗಳನ್ನು ಮುಚ್ಚುವ ಕೆಲಸ ಮಾಡುತ್ತೇವೆ ಎಂದು ಡಾ.ಹೀಮಂತ್ ಬಿಸ್ವಾಸ್ ಶರ್ಮಾ ಹೇಳಿದರು.