ಈಶಾನ್ಯ ರಾಜ್ಯಗಳ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಈಶಾನ್ಯ ರಾಜ್ಯಗಳ ಚುನಾವಣೆಯ ಪಲಿತಾಂಶ ಬಿಜೆಪಿಗೆ ಹೊಸ ಚೈತನ್ಯ ತುಂಬಿದೆ. ತ್ರಿಪುರ ಮತ್ತು ನಾಗಾಲ್ಯಾಂಡ್ ನಲ್ಲಿ ಬಿಜೆಪಿ ಮಗದೊಮ್ಮೆ ಸರಕಾರ ರಚಿಸಲಿದೆ. ಮೇಘಾಲಯದಲ್ಲೂ ಪಕ್ಷದ ಶಕ್ತಿ ಹೆಚ್ಚಿದೆ. ಈ ಚುನಾವಣಾ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ.
ಅವರು ಈಶಾನ್ಯ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿಗಳಿಸಿದ ಪ್ರಯುಕ್ತ ಬಿಜೆಪಿ ಜಿಲ್ಲಾ ಕಛೇರಿಯ ಬಳಿ ನಡೆದ ಸಂಭ್ರಮಾಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಳೆದ ಹಲವಾರು ವರ್ಷಗಳಿಂದ ಅಭಿವೃದ್ಧಿ ಮರೀಚಿಕೆಯಾಗಿದ್ದ ಈ 7 ರಾಜ್ಯಗಳು ಕಾಂಗ್ರೆಸ್ ನಿಂದ ದೂರ ಉಳಿದ ಪರಿಣಾಮವಾಗಿ, ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಆ ರಾಜ್ಯಗಳಲ್ಲಿ ರೈಲ್ವೆ, ವಿಮಾನ ಯಾನದಂತಹ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಸಾಧ್ಯವಾಗಿದೆ. ಇದರ ಫಲವಾಗಿ ಬಂದಿರುವ ಉತ್ತಮ ಫಲಿತಾಂಶ ಪಕ್ಷದ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಪೆರ್ಣಂಕಿಲ ಶ್ರೀಶ ನಾಯಕ್ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿ ನಳಿನಿ ಪ್ರದೀಪ್ ರಾವ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ.ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಪ್ರಧಾನ ಕಾರ್ಯದರ್ಶಿ ಅಲ್ವಿನ್ ಡಿಸೋಜ, ಪ್ರಮುಖರಾದ ಶ್ಯಾಮಲಾ ಎಸ್. ಕುಂದರ್, ದಿನಕರ ಶೆಟ್ಟಿ ಹೆರ್ಗ, ವಿಜಯ ಕೊಡವೂರು, ವೆಂಕಟರಮಣ ಕಿದಿಯೂರು, ಸುಂದರ್ ಜೆ. ಕಲ್ಮಾಡಿ, ಚಂದ್ರಶೇಖರ ಪ್ರಭು, ಕೃಷ್ಣಪ್ಪ ಜತ್ತನ್, ದುರ್ಗಾದಾಸ್, ದಯಾಶಿನಿ, ಸುಜಾಲ ಸತೀಶ್, ಸುಧಾ ಪೈ, ಶಕುಂತಳಾ ಶೆಟ್ಟಿ, ಕಾವೇರಿ, ಶಾಂತಿ, ಶೈಲಜಾ ಮತ್ತಿತರರು ಉಪಸ್ಥಿತರಿದ್ದರು.