ಒಬ್ಬ ಆರೋಪಿ ಶಾಸಕನನ್ನು ಪತ್ತೆ ಮಾಡಲಾಗದಷ್ಟು ರಾಜ್ಯದ ಪೊಲೀಸರು ನಿಶ್ಯಕ್ತರಾಗಿದ್ದಾರೆಯೇ?; ಶಾಸಕನನ್ನು ಜೈಲು ವಾಸದಿಂದ ಪಾರು ಮಾಡಲು CM ಹೊರಟಿದ್ದಾರೆಯೇ?: ಸರಕಾರದ ವಿರುದ್ಧ ಪ್ರಶ್ನೆ ಎತ್ತಿದ ಸಿದ್ದರಾಮಯ್ಯ

ಒಬ್ಬ ಆರೋಪಿ ಶಾಸಕನನ್ನು ಪತ್ತೆ ಮಾಡಲಾಗದಷ್ಟು ರಾಜ್ಯದ ಪೊಲೀಸರು ನಿಶ್ಯಕ್ತರಾಗಿದ್ದಾರೆಯೇ?; ಶಾಸಕನನ್ನು ಜೈಲು ವಾಸದಿಂದ ಪಾರು ಮಾಡಲು CM ಹೊರಟಿದ್ದಾರೆಯೇ?: ಸರಕಾರದ ವಿರುದ್ಧ ಪ್ರಶ್ನೆ ಎತ್ತಿದ ಸಿದ್ದರಾಮಯ್ಯ

ಬೆಂಗಳೂರು: ಒಬ್ಬ ಆರೋಪಿ ಶಾಸಕನನ್ನು ಪತ್ತೆ ಮಾಡಲಾಗದಷ್ಟು ರಾಜ್ಯದ ಪೊಲೀಸರು ನಿಶ್ಯಕ್ತರಾಗಿದ್ದಾರೆಯೇ? ನರೇಂದ್ರ ಮೋದಿ - ಅಮಿತ್ ಶಾ ಜೋಡಿ ರಾಜ್ಯಕ್ಕೆ ಭೇಟಿ ನೀಡಿದಾಗ ತಮ್ಮ ಪಕ್ಷದ ಶಾಸಕನೇ ಭ್ರಷ್ಟಾಚಾರದ ಆರೋಪದಲ್ಲಿ ಜೈಲಲ್ಲಿದ್ದು ಮುಜುಗರ ಉಂಟುಮಾಡಬಾರದು ಎಂದು ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಬಂಧಿಸುತ್ತಿಲ್ಲವೇ? ಪೊಲೀಸ್ ಗನ್ ಮ್ಯಾನ್ ಹೊಂದಿರುವ ಶಾಸಕನ ಸುಳಿವು ಇಲ್ಲಿಯ ವರೆಗೆ ಪೊಲೀಸರಿಗೆ ಸಿಗುತ್ತಿಲ್ಲ ಎಂದು ನಂಬಲು ಸಾಧ್ಯವೇ? ಹೇಗಾದರೂ ಮಾಡಿ ನಿರೀಕ್ಷಣಾ ಜಾಮೀನು ಕೊಡಿಸಿ ಆರೋಪಿ ಶಾಸಕನನ್ನು ಜೈಲು ವಾಸದಿಂದ ಪಾರು ಮಾಡಲು ಮುಖ್ಯಮಂತ್ರಿಗಳು ಹೊರಟಿದ್ದಾರೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಗೆ ಸರ್ಕಾರಿ ವಕೀಲರು ಬಲವಾದ ಆಕ್ಷೇಪಣೆ ಸಲ್ಲಿಸಲಿದ್ದಾರೆ ಎಂದು ನಂಬಬಹುದೇ? ಇಲ್ಲವೇ ಮೌನ ಸಮ್ಮತಿ ಮೂಲಕ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯಕ್ಕೆ ಅವಕಾಶ ಮಾಡಿಕೊಡುವ ಹುನ್ನಾರವನ್ನೇನಾದರೂ ಸರ್ಕಾರ ನಡೆಸುತ್ತಿದೆಯೇ? ಎಂದು ಸಿದ್ದರಾಮಯ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಸಿಸೋಡಿಯ ಬಳಿ 10 ಸಾವಿರ ಸಿಕ್ಕಿದ್ದಕ್ಕೆ CBI ಐದು ದಿನ ಕಸ್ಟಡಿಯಲ್ಲಿ ಇಟ್ಟುಕೊಂಡು ವಿಚಾರಣೆ ನಡೆಸಿತು. ಮಾಡಾಳ್ ವಿರೂಪಾಕ್ಷಪ್ಪರ ಪುತ್ರನನ್ನು ಲೋಕಾಯುಕ್ತ ಪೊಲೀಸರು ಹೆಚ್ಚಿನ ತನಿಖೆಗಾಗಿ ತಮ್ಮ (ಪೊಲೀಸ್ ) ಕಸ್ಟಡಿಗೆ ಕೇಳದೇ ಸೀದಾ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಏನಿದು ವಿಚಿತ್ರ?

ಶಾಸಕ ಮಾಡಾಳ್ ಪುತ್ರನ ಬಳಿ ತಕ್ಷಣಕ್ಕೆ 40 ಲಕ್ಷ ರೂಪಾಯಿ, ಮನೆಯಲ್ಲಿ  ಸುಮಾರು 8 ಕೋಟಿ ರೂಪಾಯಿ ನಗದು ಜತೆಗೆ ನೂರಾರು ಕೋಟಿ ಅಕ್ರಮ ಆಸ್ತಿಯ ದಾಖಲೆಗಳು ಸಿಕ್ಕರೂ ಈ ಬಗ್ಗೆ ಅರ್ಧ ಗಂಟೆ ಕೂಡ ವಿಚಾರಣೆ ನಡೆಸಬೇಕು ಎಂದು ಪೊಲೀಸರಿಗೆ  ಯಾಕೆ ಅನಿಸಲಿಲ್ಲ? ಎಂದು ಸವಿವರವಾದ ಪ್ರಶ್ನೆಯನ್ನು ಸಿದ್ದರಾಮಯ್ಯ ಸರಕಾರದ ಮುಂದಿಟ್ಟಿದ್ದಾರೆ.

Ads on article

Advertise in articles 1

advertising articles 2

Advertise under the article