ದನ ಸಾಗಿಸುತ್ತಿದ್ದ ಟ್ರಕ್ಕಿನ ಚಾಲಕನ ಮೇಲೆ ಗುಂಡು ಹಾರಿಸಿದ ದುಷ್ಕರ್ಮಿಗಳು !
ಉತ್ತರ ಪ್ರದೇಶ: ಟ್ರಕ್‌ವೊಂದರಲ್ಲಿ ದನಗಳನ್ನು ಸಾಗಿಸುತ್ತಿದ್ದ ವ್ಯಕ್ತಿಯೋರ್ವನ ಮೇಲೆ ದುಷ್ಕರ್ಮಿಗಳ ತಂಡವೊಂದು ಗುಂಡು ಹಾರಿಸಿದ್ದು, ಆತ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮೈನ್ ಪುರಿ ಜಿಲ್ಲೆಯ ಪಾರಾ ಪ್ರದೇಶದಲ್ಲಿ ನಡೆದಿದೆ.
ಗಾಯಗೊಂಡಿರುವ ಟ್ರಕ್ ಚಾಲಕನನ್ನು ಪ್ರೇಮ್ ಸಿಂಗ್ (50) ಎಂದು ಗುರುರ್ತಿಸಲಾಗಿದೆ. ಈತ ತನ್ನ ಟ್ರಕ್‌ನಲ್ಲಿ 13 ಹಸುಗಳನ್ನು ಮೈನ್‌ಪುರಿಗೆ ಸಾಗಿಸುತ್ತಿದ್ದ ವೇಳೆ ಅವರ ಮೇಲೆ ದುಷ್ಕರ್ಮಿಗಳು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಗಾಯಗೊಂಡ ಪ್ರೇಮ್ ಸಿಂಗ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಈಗ ಸ್ಥಿರವಾಗಿದೆ ಎಂದು ಪ್ಯಾರಾ ಪೊಲೀಸ್ ಠಾಣಾಧಿಕಾರಿ ಟಿಬಿ ಸಿಂಗ್ ತಿಳಿಸಿದ್ದಾರೆ.
ಗುಂಡಿನ ದಾಳಿ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 307 (ಕೊಲೆಗೆ ಯತ್ನ) ಅಡಿಯಲ್ಲಿ FIR ದಾಖಲಿಸಲಾಗಿದೆ. ಪ್ರೇಮ್ ಸಿಂಗ್ ಮೇಲೆ ನಡೆದ ಗುಂಡಿನ ದಾಳಿಯ ಹಿಂದಿನ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಮತ್ತು ತನಿಖೆ ನಡೆಯುತ್ತಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.