ಕಾಂಗ್ರೆಸ್ 'ಕೈ'ಹಿಡಿಯಲು ಮುಂದಾಗಿರುವ ಬಿಜೆಪಿ ನಾಯಕರು! ಯಡಿಯೂರಪ್ಪರನ್ನು ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ ಸಿಎಂ ಬೊಮ್ಮಾಯಿ!
ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಆಡಳಿತರೂಢ ಬಿಜೆಪಿಗೆ ಸಂಕಷ್ಟಗಳು ಎದುರಾಗುತ್ತಲೇ ಇದೆ. ಕಾಂಗ್ರೆಸ್ ಬಿಜೆಪಿಯ ಘಟಾನುಘಟಿ ನಾಯಕರುಗಳಿಗೆ ಗಾಳ ಹಾಕುತ್ತಿರುವ ಬಹಿರಂಗವಾಗುತ್ತಿರುವಂತೆಯೇ ಬಿಜೆಪಿ ಪಾಳಯದಲ್ಲಿ ತಳಮಳ ಆರಂಭವಾಗಿದೆ.
ಕಾಂಗ್ರೆಸ್-ಜೆಡಿಎಸ್ ಶಾಸಕರನ್ನು ಬಲೆಗೆ ಬೀಳಿಸಿಕೊಂಡು ಸರಕಾರ ನಡೆಸುತ್ತಿರುವ ಬಿಜೆಪಿಗೆ ಈ ಬಾರಿ ಬುದ್ದಿಕಲಿಸಲು ಮುಂದಾಗಿರುವ ಕಾಂಗ್ರೆಸ್, ಘಟಾನುಘಟಿ ನಾಯಕರನ್ನು ಕಾಂಗ್ರೆಸಿನತ್ತ ಸೆಳೆಯಲು ತಂತ್ರ ರೋಪಿಸಿದೆ.
ಪ್ರಭಾವಿ ಸಚಿವ ನಾರಾಯಣ ಗೌಡ, ವಿ.ಸೋಮಣ್ಣ ಸೇರಿದಂತೆ ಕೆಲವಿ ಹಿರಿಯ ನಾಯಕರು ಕಾಂಗ್ರೆಸ್ ಸೇರಲು ಒಂದು ಹೆಜ್ಜೆ ಮುಂದಿಟ್ಟಿದ್ದು, ಇದರಿಂದ ಸಂಕಷ್ಟಕ್ಕೀಡಾಗಿರುವ ಬಿಜೆಪಿ, ಮೋದಿ ಹಾಗು ಅಮಿತ್ ಶಾರನ್ನು ರಾಜ್ಯಕ್ಕೆ ಕರೆಸುವ ಮೂಲಕ ಬಿಜೆಪಿಯನ್ನು ಗಟ್ಟಿಗೊಳಿಸಲು ಮಾಡಿದ ಯತ್ನವೆಲ್ಲ ವಿಫಲವಾಗಿದೆ ಎಂದು ಹೇಳಲಾಗುತ್ತಿದೆ.
ಸಚಿವ ನಾರಾಯಣ ಗೌಡ, ವಿ.ಸೋಮಣ್ಣ ಹಾಗು ಇತರರನ್ನು ಸಮಾಧಾನ ಪಡಿಸುವ ಕುರಿತಂತೆ ಬಿಜೆಪಿ ನಡೆಸುತ್ತಿರುವ ಪ್ರಯತ್ನದ ಮಧ್ಯೆ ಸಿಎಂ ಬೊಮ್ಮಾಯಿ ಅವರು ಯಡಿಯೂರಪ್ಪ ಅವರನ್ನು ಭೇಟಿ ಮಾಡಿ 40 ನಿಮಿಷ ರಹಸ್ಯ ಸಭೆ ಮಾಡಿದ್ದಾರೆ ಎಂದು ಹೇಳಲಾಗಿದೆ.
ಸೋಮವಾರ ಯಡಿಯೂರಪ್ಪರನ್ನು ಭೇಟಿಯಾಗಿ ಮಹತ್ವದ ಮಾತುಕತೆ ನಡೆಸಿರುವ ಬೊಮ್ಮಾಯಿ, ಮತ್ತೆ ರಾಜ್ಯದಲ್ಲಿ ಕಮಲ ಅರಳಿಸಲು ಹಾಗು ತಮ್ಮ ನಾಯಕರನ್ನು ಕಟ್ಟಿ ಹಾಕುವ ಬಗ್ಗೆ ಚರ್ಚೆ ನಡೆಸಿದ್ದಾರೆ.