ನಾನೇ ಮುಂದಿನ ಮುಖ್ಯಮಂತ್ರಿ ಎಂದ ಬಸವರಾಜ ಬೊಮ್ಮಾಯಿ
Wednesday, March 22, 2023
ಬಾಗಲಕೋಟೆ: ನಾನೇ ಮುಂದಿನ ಮುಖ್ಯಮಂತ್ರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಮುಧೋಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಅವರು, ಸಚಿವ ಮುರುಗೇಶ್ ನಿರಾಣಿ ಅವರನ್ನು ನಗುನಗುತ್ತಲೇ ಕಾಲೆಳೆದ ವಿದ್ಯಮಾನ ನಡೆಯಿತು.
ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಬೊಮ್ಮಾಯಿ ನೀಡಿದ ಈ ಹೇಳಿಕೆ ಪಕ್ಷದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ.
ಮುಧೋಳದ ಬೀಳಗಿಯಲ್ಲಿ ನೀರಾವರಿ ಸೇರಿದಂತೆ ನೂರಾರು ಅಭಿವೃದ್ಧಿ ಕಾರ್ಯಗಳಾಗಿದ್ದು, ಸಚಿವ ಮುರುಗೇಶ್ ನಿರಾಣಿ ಅವರು ತನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗಿಲ್ಲ, ನೀವು ಚಿಂತೆ ಮಾಡಬೇಡಿ, ನಾನು ಮತ್ತೆ ಮುಖ್ಯಮಂತ್ರಿಯಾಗಿ ಬೀಳಗಿಗೆ ಬರುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.