ಕಾಂಗ್ರೆಸ್ ಸೇರುವಂತೆ ಬಿಜೆಪಿ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿರುವ ಡಿ.ಕೆ.ಶಿವಕುಮಾರ್: ಸಿಎಂ ಬೊಮ್ಮಾಯಿ ಆರೋಪ

ಕಾಂಗ್ರೆಸ್ ಸೇರುವಂತೆ ಬಿಜೆಪಿ ಶಾಸಕರಿಗೆ ದೂರವಾಣಿ ಕರೆ ಮಾಡುತ್ತಿರುವ ಡಿ.ಕೆ.ಶಿವಕುಮಾರ್: ಸಿಎಂ ಬೊಮ್ಮಾಯಿ ಆರೋಪ

ಬೆಳಗಾವಿ: KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್  ಸೋಲಿನ ಹತಾಶೆಯಿಂದ ಬಿಜೆಪಿಯ ಎಲ್ಲ ಶಾಸಕರಿಗೆ ದೂರವಾಣಿ ಕರೆ ಮಾಡಿ, ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಟಿಕೆಟ್ ಕೊಡಿಸುವುದಾಗಿ ಹೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ.

ಎರಡು-ಮೂರು ದಿನಗಳಿಂದ ಡಿಕೆ ಶಿವಕುಮಾರ್ BJP ಶಾಸಕರಿಗೆ ಫೋನ್ ಮಾಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರೆ ಕಾಂಗ್ರೆಸ್ ಟಿಕೆಟ್ ನೀಡುವುದಾಗಿ ಹೇಳುತ್ತಿದ್ದಾರೆ. ಸೋಲಿನ ಭೀತಿಯಲ್ಲಿದ್ದಾರೆ ಎಂದು ಬೊಮ್ಮಾಯಿ ದೂರಿದರು.

ಈ ಬಾರಿಯ ರಾಜ್ಯ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿಗಳಿಲ್ಲದ ಕಾರಣ, ಶಿವಕುಮಾರ್ ಚುನಾವಣೆಗೆ ಮುನ್ನ ಹತಾಶರಾಗಿದ್ದಾರೆ. ಅವರು BJP ಶಾಸಕರನ್ನು ಸಂಪರ್ಕಿಸುತ್ತಿರುವ ರೀತಿಯನ್ನು ಗಮನಿಸಿದರೆ ಕಾಂಗ್ರೆಸ್ ಸಂಪೂರ್ಣ ನಾಶವಾಗಿದೆ ಎಂಬುದು ಸ್ಪಷ್ಟವಾಗಿದೆ ಎಂದು ಬೊಮ್ಮಾಯಿ ಹೇಳಿದರು. 

ಈ ಬಾರಿಯ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಏಪ್ರಿಲ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Ads on article

Advertise in articles 1

advertising articles 2

Advertise under the article