ದೇವಸ್ಥಾನವೊಂದಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು

ದೇವಸ್ಥಾನವೊಂದಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರನ್ನು ನಿಲ್ಲಿಸಿ ತಪಾಸಣೆ ನಡೆಸಿದ ಚುನಾವಣಾಧಿಕಾರಿಗಳು

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚಿಕ್ಕಬಳ್ಳಾಪುರ ಜಿಲ್ಲೆಯ ದೇವಸ್ಥಾನವೊಂದಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರನ್ನು ತಡೆದ ಚುನಾವಣಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಬೊಮ್ಮಾಯಿ ಅವರ ಪುತ್ರನ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅವರು ಇಂದು ಘಾಟಿ ಸುಬ್ರಮಣ್ಯ ದೇವಾಲಯಕ್ಕೆ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಬಳಿಯ ಹೊಸಹುಡ್ಯ ಚೆಕ್ ಪೋಸ್ಟ್ ಬಳಿ ಚುನಾವಣಾಧಿಕಾರಿಗಳು ಅವರ ಕಾರು ನಿಲ್ಲಿಸಿ, ಹಿಂದಿನ ಡಿಕ್ಕಿ ತೆಗೆಸಿ ತಪಾಸಣೆ ನಡೆಸಿದ್ದಾರೆ. 

ವಿಧಾನಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಿರುವ ಹಿನ್ನೆಲೆ ಬಹುತೇಕ ಎಲ್ಲ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿಯೇ ಬೊಮ್ಮಾಯಿ ಅವರ ಕಾರನ್ನು ಪರಿಶೀಲನೆ ನಡೆಸಲಾಗಿದೆ. ಈ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಹಾಗೂ ಎಸ್ ಎಸ್ ಟಿ ಸ್ಥಳದಲ್ಲಿ ಹಾಜರಿದ್ದರು.

Ads on article

Advertise in articles 1

advertising articles 2

Advertise under the article