ಸಂಘಪರಿವಾರದ ವಿರುದ್ಧ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿ ಬಂಧನಕ್ಕೊಳಗಾಗಿದ್ದ ನಟ ಚೇತನ್'ಗೆ ಜಾಮೀನು
Thursday, March 23, 2023
ಬೆಂಗಳೂರು: ಸಂಘಪರಿವಾರದ ವಿರುದ್ಧ ಸಾಮಾಜಿಕ ತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದ ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ಅವರಿಗೆ ಜಾಮೀನು ಮಂಜೂರಾಗಿದೆ.
25 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಹಾಗು ಒಬ್ಬರ ಭದ್ರತೆ ನೀಡುವಂತೆ ಬೆಂಗಳೂರಿನ 32ನೇ ACMM ನ್ಯಾಯಾಧೀಶೆ ಲತಾ ಅವರು ಆದೇಶಿಸಿದ್ದಾರೆ.
ಸಂಘಪರಿವಾರದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣ ಸಂಬಂಧ ಚೇತನ್ನನ್ನ ಬಂಧಿಸಿದ್ದ ಶೇಷಾದ್ರಿಪುರಂ ಠಾಣಾ ಪೊಲೀಸರು, ಕೋರ್ಟ್ಗೆ ಹಾಜರು ಪಡಿಸಿದ್ದು, ಅದರಂತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶಿಸಿತ್ತು. ಬಳಿಕ ಪರಪ್ಪನ ಅಗ್ರಹಾರ ಜೈಲು ಸೇರಿದ್ದ ಚೇತನ್ಗೆ ಇದೀಗ ಜಾಮೀನು ಮಂಜೂರಾಗಿದೆ.