
ದ.ಕ.ದಲ್ಲಿ ಖಾದರ್, ರೈ, ರಕ್ಷಿತ್, ಮಿಥುನ್ ರೈ, ಕೃಷ್ಣಪ್ಪಗೆ ಟಿಕೆಟ್; ಸೊರಕೆ, ಪೂಜಾರಿ, ಮೊಳಹಳ್ಳಿಗೆ ಟಿಕೆಟ್: ಟಿಕೆಟ್ ಘೋಷಣೆಯಾಗದ ಕ್ಷೇತ್ರಗಳಲ್ಲಿ ನಡೆಯುತ್ತಿದೆ ಬಿಗ್ ಫೈಟ್!
ಮಂಗಳೂರು: ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ ತನ್ನ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಯ ಕೆಲವು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದಾರೆ, ಇನ್ನು ಕೆಲವು ಕಡೆ ಇನ್ನೂ ಘೋಷಣೆ ಮಾಡದೆ ಹಾಗೆಯೇ ಉಳಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕ್ಷೇತ್ರದಲ್ಲಿ ಯು.ಟಿ.ಖಾದರ್, ಬಂಟ್ವಾಳದಲ್ಲಿ ರಮಾನಾಥ ರೈ, ಬೆಳ್ತಂಗಡಿ ರಕ್ಷಿತ್ ಶಿವರಾಂ, ಮೂಡಬಿದ್ರೆ ಮಿಥುನ್ ರೈ, ಸುಳ್ಯ ಕೃಷ್ಣಪ್ಪ ಅವರಿಗೆ ಟಿಕೆಟ್ ನೀಡಲಾಗಿದೆ.
ಬಾಕಿ ಇರಿಸಲಾಗಿರುವ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಇನಾಯತ್ ಅಲಿ ಹಾಗು ಮೊಯಿದಿನ್ ಬಾವಾ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ, ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಜೆ.ಆರ್.ಲೋಬೊ, ಐವನ್ ಡಿಸೋಜ, ಬಿಲ್ಲವ ಮುಖಂಡ ಪದ್ಮರಾಜ್ ಆರ್. ಮಧ್ಯೆ ಟಿಕೆಟ್'ಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಪುತ್ತೂರಿನಲ್ಲಿ ಶಕುಂತಲಾ ಶೆಟ್ಟಿ ಹಾಗು ಅಶೋಕ್ ರೈ ಮಧ್ಯೆ ಟಿಕೆಟ್'ಗಾಗಿ ಕಾದಾಟ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಈ ಮೂರೂ ಕ್ಷೇತ್ರಗಳನ್ನು ಟಿಕೆಟ್ ಘೋಷಿಸದೆ ಹಾಗೆಯೇ ಉಳಿಸಿಕೊಳ್ಳಲಾಗಿದೆ.
ಉಡುಪಿಯಲ್ಲಿ ಕಾಪು ಕ್ಷೇತ್ರದಲ್ಲಿ ವಿನಯ ಕುಮಾರ್ ಸೊರಕೆ, ಬೈಂದೂರಿನಲ್ಲಿ ಗೋಪಾಲ್ ಪೂಜಾರಿ, ಕುಂದಾಪುರದಲ್ಲಿ ದಿನೇಶ್ ಹೆಗ್ಡೆ ಮೊಳಹಳ್ಳಿ ಅವರಿಗೆ ಟಿಕೆಟ್ ನೀಡಲಾಗಿದೆ.
ಉಡುಪಿ ಕ್ಷೇತ್ರದಲ್ಲಿ ಕೃಷ್ಣಾ ಮೂರ್ತಿ ಆಚಾರ್ಯ, ಪ್ರಸಾದ್ ರಾಜ್ ಕಾಂಚನ್, ಅಮೃತ್ ಶೆಣೈ, ರಮೇಶ್ ಕಾಂಚನ್, ಅಶೋಕ್ ಕೊಡವೂರು, ಶಂಕರ್ ಕುಂದರ್, ದಿವಾಕರ್ ಕುಂದರ್ ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಕಾರ್ಕಳ ಕ್ಷೇತ್ರದಲ್ಲಿ ಮುನಿಯಾಲ್ ಉದಯ ಕುಮಾರ್ ಶೆಟ್ಟಿ, ಮಂಜುನಾಥ್ ಪೂಜಾರಿ, ಸುರೇಂದ್ರ ಶೆಟ್ಟಿಶೆಟ್ಟಿ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಈ ಕ್ಷೇತ್ರಕ್ಕೆ ಟಿಕೆಟ್ ಘೋಷಿಸದೆ ಬಾಕಿ ಉಳಿಸಿಕೊಳ್ಳಲಾಗಿದೆ.