ಪದವೀಧರರಿಗೆ 3 ಸಾವಿರ ರೂ.-ಡಿಪ್ಲೊಮಾ ಪದವೀಧರರಿಗೆ 1500 ರೂ. ನಿರುದ್ಯೋಗಿ ಭತ್ಯೆ: ಕಾಂಗ್ರೆಸಿನ 4ನೇ 'ಗ್ಯಾರಂಟಿ' ಘೋಷಣೆ

ಪದವೀಧರರಿಗೆ 3 ಸಾವಿರ ರೂ.-ಡಿಪ್ಲೊಮಾ ಪದವೀಧರರಿಗೆ 1500 ರೂ. ನಿರುದ್ಯೋಗಿ ಭತ್ಯೆ: ಕಾಂಗ್ರೆಸಿನ 4ನೇ 'ಗ್ಯಾರಂಟಿ' ಘೋಷಣೆ



ಬೆಳಗಾವಿ: ಈ ಬಾರಿಯ ವಿಧಾನಸಭೆ ಚುನಾವಣೆ ಗೆಲ್ಲಲು ಪ್ರತಿಪಕ್ಷ ಕಾಂಗ್ರೆಸ್ ರಾಜ್ಯದ ಜನತೆಗೆ ಈಗಾಗಲೇ ಹಲವು ಗ್ಯಾರಂಟಿಗಳನ್ನು ನೀಡಿದ್ದು, ಸೋಮವಾರ ನಿರುದ್ಯೋಗಿ ಯುವಜನರಿಗೆ ಯುವನಿಧಿ ಯೋಜನೆ ಜಾರಿಯ ಮೂಲಕ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂಪಾಯಿ ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ 1500 ರೂ. ಭತ್ಯೆ ನೀಡುವುದಾಗಿ ಭರವಸೆ ನೀಡಿದೆ.

ಸೋಮವಾರ ಬೆಳಗಾವಿಯಲ್ಲಿ ನಡೆದ ಯುವ ಕ್ರಾತಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ನ 'ಯುವನಿಧಿ' ಎಂಬ 4ನೇ ಗ್ಯಾರಂಟಿಯನ್ನು ಘೋಷಣೆ ಮಾಡಿದರು.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಯುವಕರನ್ನು ಗಮನದಲ್ಲಿಟ್ಟುಕೊಂಡು 'ಯುವನಿಧಿ' ಯೋಜನೆ ಘೋಷಿಸಿದ್ದು, ಈ ಯೋಜನೆ ಅಡಿ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3 ಸಾವಿರ ರೂಪಾಯಿ ಹಾಗೂ ನಿರುದ್ಯೋಗಿ ಡಿಪ್ಲೊಮಾ ಪದವೀಧರರಿಗೆ 1500 ರೂ. ಭತ್ಯೆ ನೀಡುವುದಾಗಿ ಭರವಸೆ ನೀಡಿದೆ.

ಈ ಹಿಂದೆ ಗ್ಯಾರಂಟಿ ಘೋಷಣೆಯೊಂದಿಗೆ ಗೃಹ ಲಕ್ಷ್ಮಿ ಯೋಜನೆ ಅಡಿ ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ,  200 ಯೂನಿಟ್ ಉಚಿತ ವಿದ್ಯುತ್ ಹಾಗು ಅನ್ನಭಾಗ್ಯ ಯೋಜನೆಯಡಿ ಬಡಕುಟುಂಬದ ಪ್ರತಿ ಸದಸ್ಯನಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು.

ಈ ಯೋಜನೆ ಬಗ್ಗೆ ಕಾಂಗ್ರೆಸ್ ಟ್ವೀಟ್ ಮೂಲಕ ಜನರಿಗೆ ಭರವಸೆ ನೀಡಿದ್ದು, 2 ವರ್ಷಗಳವರೆಗೆ ಪ್ರತಿ ತಿಂಗಳು ನಿರುದ್ಯೋಗಿ ಪದವೀಧರರಿಗೆ 3000 ಆರ್ಥಿಕ ನೆರವು ಮತ್ತು ನಿರುದ್ಯೋಗಿ ಡಿಪ್ಲೊಮಾ ಪಧವೀಧರರಿಗೆ 1500 ನಿರುದ್ಯೋಗ ಭತ್ಯೆ ನೀಡುವ ಯುವ ನಿಧಿ ಯೋಜನೆಯನ್ನು ಘೋಷಿಸುತ್ತಿದ್ದೇವೆ. 

ನಿರುದ್ಯೋಗಿ ಯುವಜನರಿಗೆ ಯುವನಿಧಿ ಯೋಜನೆ ಜಾರಿಯ ಮೂಲಕ ಆರ್ಥಿಕ ನೆರವು ನೀಡುವುದು ಮಾತ್ರವಲ್ಲ, ಅಗತ್ಯ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಸಿ, ಯುವಜನರ ಭವಿಷ್ಯ ರೂಪಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕಾಂಗ್ರೆಸ್ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article