
ಕಾಂಗ್ರೆಸ್ ಕರೆ ನೀಡಿದ್ದ 'ಕರ್ನಾಟಕ ಬಂದ್' ರದ್ದು: ಕಾರಣವೇನು ಗೊತ್ತೇ..?
ಬೆಂಗಳೂರು: ಭ್ರಷ್ಟಾಚಾರ ವಿರೋಧಿಸಿ ನಾಳೆ(ಮಾರ್ಚ್ 9 ರಂದು) ಕಾಂಗ್ರೆಸ್‍ನಿಂದ ಕರೆಕೊಡಲಾಗಿದ್ದ 2 ಗಂಟೆಗಳ ಕಾಲ ಕರ್ನಾಟಕ ಬಂದ್ ರದ್ದಾಗಿದೆ.
ನಾಳೆ ಪಿಯುಸಿ ಪರೀಕ್ಷೆ ನಡೆಯಲಿದ್ದು, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ತೊಂದರೆ ಆಗಬಾರದೆಂಬ ಕಾರಣಕ್ಕೆ ಈ ಬಂದ್ ವಾಪಸ್ ಪಡೆದಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ.
ಭ್ರಷ್ಟ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಗುರುವಾರ ಬೆಳಿಗ್ಗೆ 9 ರಿಂದ 11ಗಂಟೆವರೆಗೆ 2 ಗಂಟೆಗಳ ಕಾಲ ಕರ್ನಾಟಕ ಬಂದ್'ಗೆ ಕಾಂಗ್ರೆಸ್ ನಾಯಕರು ಕರೆ ನೀಡಿದ್ದರು.
ಗುರುವಾರದಿಂದ ದ್ವಿತೀಯ PUC ಪರೀಕ್ಷೆ ಆರಂಭವಾಗಲಿದ್ದು, ಕಾಲೇಜು ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ಅನಾನುಕೂಲವಾಗುವ ಹಿನ್ನೆಲೆ ಕರ್ನಾಟಕ ಬಂದ್'ನ್ನು ಕಾಂಗ್ರೆಸ್ ನಾಯಕರು ಹಿಂಪಡೆದಿದ್ದಾರೆ.
ಕೆಲವು ದಿನಗಳ ಹಿಂದೆ BJP ಶಾಸಕ ಮಾಡಾಳು ವಿರುಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ ಸಿಲುಕಿದ ಬೆನ್ನಲ್ಲೇ BJP ಸರಕಾರದ ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ್ದ ಕಾಂಗ್ರೆಸ್, ಮಾರ್ಚ್ 9 ರಂದು ಕರೆ ಕೊಟ್ಟಿದ್ದ ಕರ್ನಾಟಕ ಬಂದ್'ನ್ನು ಕಾಂಗ್ರೆಸ್ರ ನಾಯಕರು ಹಿಂಪಡೆದುಕೊಂಡಿದ್ದಾರೆ.