ಕಾಂಗ್ರೆಸ್ ನಾಯಕ ಧ್ರುವನಾರಾಯಣ ಹೃದಯಾಘಾತದಿಂದ ನಿಧನ: ನಾಯಕರಿಂದ ಸಂತಾಪ

ಕಾಂಗ್ರೆಸ್ ನಾಯಕ ಧ್ರುವನಾರಾಯಣ ಹೃದಯಾಘಾತದಿಂದ ನಿಧನ: ನಾಯಕರಿಂದ ಸಂತಾಪ

ಮೈಸೂರು: ಶನಿವಾರ ಬೆಳಗ್ಗೆ ಮಾಜಿ ಸಂಸದ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ಮೈಸೂರಿನಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಅವರಿಗೆ ಶನಿವಾರ ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿತ್ತು. ಈ ವೇಳೆ  ಧ್ರುವನಾರಾಯಣರನ್ನು ಮೈಸೂರಿನ ಒಂಟಿಕೊಪ್ಪಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿನ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ಧ್ರುವನಾರಾಯಣ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ.

1983ರಲ್ಲಿ ಕಾಂಗ್ರೆಸ್ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಿದ್ದ ಧ್ರುವನಾರಾಯಣ, 1986ರಲ್ಲಿ ಎನ್ ಎಸ್ ಯುಐ ಬೆಂಗಳೂರು ಘಟಕದ ಅಧ್ಯಕ್ಷರಾಗಿ ಬಳಿಕ ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. 

ಜೊತೆಗೆ  ಕೊಳ್ಳೇಗಾಲ ಕ್ಷೇತ್ರದಿಂದ 1 ಬಾರಿ, ಸಂತೇಮರಹಳ್ಳಿ ಕ್ಷೇತ್ರದಿಂದ 1 ಬಾರಿ ಶಾಸಕರಾಗಿ ವಿಧಾನಸಭೆಗೂ ಆಯ್ಕೆಯಾಗಿದ್ದರು. ಈ ಬಾರಿಯ  ವಿಧಾನಸಭೆ ಚುನಾವಣೆಗೆ ನಂಜನಗೂಡು ಕ್ಷೇತ್ರದಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದ ಧ್ರುವನಾರಾಯಣ, ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ವಿ. ಶ್ರೀನಿವಾಸ್ ಪ್ರಸಾದ್ ಎದುರು ಸೋಲು ಅನುಭವಿಸಿದ್ದರು.

ಧ್ರುವನಾರಾಯಣ ಅವರ ನಿಧನಕ್ಕೆ ಮಾಜಿ CM  ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮೈಸೂರಿನ ವಿಜಯನಗರದ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆವರೆಗೆ ಧ್ರುವನಾರಾಯಣ ಅವರ ಅಂತಿಮ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ರವಿವಾರ(ನಾಳೆ) ಮಧ್ಯಾಹ್ನ 2 ಗಂಟೆಗೆ ಹುಟ್ಟೂರು ಹೆಗ್ಗವಾಡಿಯಲ್ಲಿ ಧ್ರುವನಾರಾಯಣ ಅವರ ಅಂತ್ಯಕ್ರಿಯೆ ನಡೆಯಲಿದೆ.

Ads on article

Advertise in articles 1

advertising articles 2

Advertise under the article