ಮೈಕ್​​​ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?: ಆಝಾನ್  ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಈಶ್ವರಪ್ಪ

ಮೈಕ್​​​ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ?: ಆಝಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಈಶ್ವರಪ್ಪ

ಮಂಗಳೂರು: ರವಿವಾರ ಕಾವೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಕಾರ್ಯಕ್ರಮದಲ್ಲಿ ಭಾಷಣ ಮಧ್ಯೆ ಆರಂಭವಾದ ಆಝಾನ್‍ಗೆ ಮಾಜಿ ಸಚಿವ ಈಶ್ವರಪ್ಪವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಈಶ್ವರಪ್ಪ ಮಾತನಾಡುತ್ತಿದ್ದ ವೇಳೆ ಆಝಾನ್‍ಗೆ ಮೊಳಗಿತು. ಇದರಿಂದ ಸಿಡಿಮಿಡಿಗೊಂಡ ಈಶ್ವರಪ್ಪ, ನನಗೆ ಎಲ್ಲಿ ಹೋದರೂ ಇದೊಂದು ತಲೆನೋವು. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ?, ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ, ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

ದೇಶದಲ್ಲಿ ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳುತ್ತಾರೆ. ಮೈಕ್ ನಲ್ಲಿ ಆಝಾನ್‍  ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ ಎಂದು ಪ್ರಶ್ನಿಸಿದ ಈಶ್ವರಪ್ಪ, ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ, ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ, ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ, ಆದರೆ ಮೈಕ್ ಹಿಡ್ಕೊಂಡು  ಮಾತ್ರ ಆಝಾನ್‍ ಹೇಳಿದರೆ ಅವನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಈ ಎಲ್ಲ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಆಝಾನ್ ಬಗ್ಗೆ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದರು.

Ads on article

Advertise in articles 1

advertising articles 2

Advertise under the article