ಈ ಬಾರಿಯ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ; EVM ಬದಲಾವಣೆಯೂ ಇಲ್ಲ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಈ ಬಾರಿಯ ಚುನಾವಣೆಯಲ್ಲಿ 80 ವರ್ಷ ಮೇಲ್ಪಟ್ಟವರಿಗೆ, ವಿಶೇಷ ಚೇತನರಿಗೆ ಮನೆಯಿಂದಲೇ ಮತ ಚಲಾಯಿಸಲು ಅವಕಾಶ; EVM ಬದಲಾವಣೆಯೂ ಇಲ್ಲ: ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್

ಬೆಂಗಳೂರು: ಈ ಬಾರಿಯ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 80 ವರ್ಷಕ್ಕೂ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರೂ ಮನೆಯಿಂದಲೇ ಮತದಾನ ಮಾಡಲು ವ್ಯವಸ್ಥೆ ಮಾಡಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆಯ ಸಿದ್ಧತೆ ಪರಿಶೀಲನೆಗೆ 3 ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿರುವ ಕೇಂದ್ರ ಚುನಾವಣಾ ಆಯೋಗ ವಿಧಾನಸೌಧದಲ್ಲಿ ಶನಿವಾರ ರಾಜ್ಯ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ಧತೆ ಕುರಿತು ಮಾಹಿತಿ ನೀಡಿದರು.

ಈ ಬಾರಿ ರಾಜ್ಯದಲ್ಲಿ ಎಲ್ಲಾ 80 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ವಿಶೇಷ ಮತದಾರರು  ಬಯಸಿದಲ್ಲಿ, ಅವರ ಮನೆಯಿಂದಲೂ ಮತದಾನ ಮಾಡುವ ಸೌಲಭ್ಯವನ್ನು ಚುನಾವಣಾ ಆಯೋಗ ಒದಗಿಸಲಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ 5 ದಿನಗಳೊಳಗೆ ಫಾರ್ಮ್ 12 ಡಿ ಲಭ್ಯವಿರುತ್ತದೆ. ಇದರಿಂದ 80 ವರ್ಷಕ್ಕೂ ಮೇಲ್ಪಟ್ಟವರು ಅಥವಾ  ವಿಶೇಷ ಚೇತನ ಮತದಾರರು ಮನೆಯಿಂದಲೇ ಮತದಾನ ಮಾಡಬಹುದು ಎಂದು ರಾಜೀವ್ ಕುಮಾರ್ ಹೇಳಿದರು.

ಮೇ 24ಕ್ಕೆ ಹಾಲಿ BJP ಸರ್ಕಾರದ ಅವಧಿ ಅಂತ್ಯವಾಗಲಿದ್ದು, ಅದಕ್ಕೂ ಮುಂಚಿತವಾಗಿ ಕರ್ನಾಟಕದಲ್ಲಿ ಚುನಾವಣೆ ಮುಗಿಸಬೇಕಾಗಿದೆ. ಈ ಬಾರಿ ರಾಜ್ಯದಲ್ಲಿ ಒಟ್ಟು 58, 282 ಮತಗಟ್ಟೆ ಸ್ಥಾಪಿಸಲಾಗುವುದು, 1 ಮತಗಟ್ಟೆಯಲ್ಲಿ 883 ಜನರು ಮತ ಚಲಾಯಿಸಬಹುದಾಗಿದ್ದು, ನಗರ ಪ್ರದೇಶದಲ್ಲಿ 24, 063 ಮತಗಟ್ಟೆ ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಒಟ್ಟು 2, 2, 73, 579 ಮತದಾರರಿದ್ದು,  ವಿಶೇಷ ಚೇತನರಿಗೆ ವೀಲ್ಹ್ ಚೇರ್ ಸೇರಿದಂತೆ ಮತದಾನಕ್ಕೆ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಗುಜರಾತ್​​ನಲ್ಲಿ ಬಳಸಿದ ವಿದ್ಯುನ್ಮಾನ ಮತಯಂತ್ರಗಳನ್ನು (EVM) ಬಳಸಬಾರದು ಎಂದು ಕಾಂಗ್ರೆಸ್ ಮಾಡಿರುವ ಮನವಿಯನ್ನು ತಿರಸ್ಕರಿಸಿದ ಅವರು, ವಿದ್ಯುನ್ಮಾನ ಮತಯಂತ್ರಗಳನ್ನು (EVM) ಎಲ್ಲಿಯೂ, ಯಾರಿಂದಲೂ ದುರುಪಯೋಗ ಮಾಡಲು ಸಾಧ್ಯವಿಲ್ಲ. ಅವುಗಳನ್ನು ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

Ads on article

Advertise in articles 1

advertising articles 2

Advertise under the article