ಕರ್ನಾಟಕದಲ್ಲಿ ಮೇ 10ರಂದು ವಿಧಾನಸಭಾ ಚುನಾವಣೆ: ಮೇ 13ರಂದು ಫಲಿತಾಂಶ
Wednesday, March 29, 2023
ನವದೆಹಲಿ: ಕರ್ನಾಟಕ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆಯಾಗಿದ್ದು, ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ(ಫಲಿತಾಂಶ) ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗವು ಚುನಾವಣಾ ದಿನಾಂಕವನ್ನು ಇಂದು ಘೋಷಣೆ ಮಾಡಿದ್ದು, ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ10 ರಂದು ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ಅಂದರೆ ಫಲಿತಾಂಶ ಹೊರಬೀಳಲಿದೆ. ಇನಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.