ಬೇಲೂರಿನ ಶ್ರೀ ಚನ್ನಕೇಶವ ದೇವರ ರಥೋತ್ಸವಕ್ಕೂ ಮುನ್ನ ಕುರಾನ್ ಪಠಣೆ: ಸಂಘಪರಿವಾರದ ಸಂಘಟನೆಗಳಿಂದ ಪ್ರತಿಭಟನೆ; ಪೊಲೀಸರಿಂದ ಲಘು ಲಾಠಿ ಪ್ರಹಾರ

ಬೇಲೂರಿನ ಶ್ರೀ ಚನ್ನಕೇಶವ ದೇವರ ರಥೋತ್ಸವಕ್ಕೂ ಮುನ್ನ ಕುರಾನ್ ಪಠಣೆ: ಸಂಘಪರಿವಾರದ ಸಂಘಟನೆಗಳಿಂದ ಪ್ರತಿಭಟನೆ; ಪೊಲೀಸರಿಂದ ಲಘು ಲಾಠಿ ಪ್ರಹಾರ

 


ಹಾಸನ: ಹಲವು ದಶಕಗಳಿಂದ ಸಂಪ್ರದಾಯದಂತೆ ನಡೆದುಕೊಂಡು ಬರುತ್ತಿದ್ದ ಐತಿಹಾಸಿಕ ಬೇಲೂರಿನ ಶ್ರೀ ಚನ್ನಕೇಶವ ದೇವರ ರಥೋತ್ಸವಕ್ಕೂ ಮುನ್ನ ನಡೆಯುವ ಕುರಾನ್ ಪಠಣೆ ನಿಲ್ಲಿಸಬೇಕೆಂದು ಸಂಘಪರಿವಾರದ ಸಂಘಟನೆಗಳು ಪ್ರತಿಭಟನೆ ನಡೆಸಿದೆ.

ಬೇಲೂರಿನ ಶ್ರೀ ಚನ್ನಕೇಶವ ದೇವರ ರಥೋತ್ಸವ ಸಂದರ್ಭದಲ್ಲಿ ಕುರಾನ್ ಪಠಣ ಮಾಡದಂತೆ ಬೇಲೂರಿನಲ್ಲಿ ಚನ್ನಕೇಶವ ದೇವಸ್ಥಾನದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ. ಸಂಘಪರಿವಾರದ ಕಾರ್ಯಕರ್ತರು ಧರಣಿ ನಡೆಸಿ ರಥೋತ್ಸವದ ವೇಳೆ ಕುರಾನ್ ಪಠಣ ರದ್ದು ಮಾಡುವಂತೆ ತಹಶೀಲ್ದಾರ್​ಗೆ ಮನವಿ ಸಲ್ಲಿಸಿದ್ದಾರೆ. 

ಸಂಪ್ರದಾಯ ಹಲವಾರು ವರ್ಷಗಳಿಂದಲೂ ಐತಿಹಾಸಿಕ ಬೇಲೂರಿನ ಶ್ರೀ ಚನ್ನಕೇಶವ ಜಾತ್ರೆ ವೇಳೆ ಕುರಾನ್ ಪಠಣ ಕಾರ್ಯ ನಡೆಯುತ್ತಿದ್ದು, ಇದನ್ನು ಕೆಲವು ವರ್ಷಗಳಿಂದ  ಸಂಘಪರಿವಾರದ ಸಂಘಟನೆಗಳು ವಿರೋಧಿಸುತ್ತಲೇ ಬರುತ್ತಿದೆ.

ಏಪ್ರಿಲ್ 4ರಂದು ಐತಿಹಾಸಿಕ ಬೇಲೂರಿನ ಶ್ರೀ ಚನ್ನಕೇಶವ ಜಾತ್ರೆ ನಡೆಯಲಿದ್ದು, ಏಪ್ರಿಲ್​​​ 3ರೊಳಗೆ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಬೇಕು ಎಂದು ಸಂಘಪರಿವಾರದ ಕಾರ್ಯಕರ್ತರು ಆಗ್ರಹಿಸಿದ್ದಾರೆ. 

ಪ್ರತಿಭಟನೆಯ ವೇಳೆ ಅಲ್ಲಿದ್ದ ಮುಸ್ಲಿಂ ಯುವಕರು ‘ಕುರಾನ್ ಜಿಂದಾಬಾದ್’ ಎಂದು ಘೋಷಣೆ ಕೂಗಿದ್ದು, ಇದನ್ನು ವಿರೋಧಿಸಿದ ಸಂಘಪರಿವಾರದ ಕಾರ್ಯಕರ್ತರು, ಮುಸ್ಲಿಂ ಯುವಕರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಮುಸ್ಲಿಂ ಯುವಕನನ್ನು ವಶಕ್ಕೆ ಪಡೆದಿದ್ದಾರೆ.  ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. 

Ads on article

Advertise in articles 1

advertising articles 2

Advertise under the article