5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆಗಳನ್ನು ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದ್ದ 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆಗಳನ್ನು ರದ್ದು ಮಾಡಿ ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಹತ್ವದ ತೀರ್ಪು ನೀಡಿದೆ.

ಬೋರ್ಡ್‌ ಪರೀಕ್ಷೆಯ ವಿರುದ್ಧ ಅನುದಾನ‌ರಹಿತ ಶಾಲೆಗಳ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಶುಕ್ರವಾರ ನಡೆಸಿದ ನ್ಯಾ.ಪ್ರದೀಪ್ ಸಿಂಗ್ ಯೆರೂರ್ ಅವರಿದ್ದ ಹೈಕೋರ್ಟ್'ನ ಏಕ ಸದಸ್ಯ ಪೀಠ ಈ ಆದೇಶ ನೀಡಿದೆ. ಮಾ.13ರಿಂದ 18ರವರೆಗೆ ಮೌಲ್ಯಾಂಕನ ಪರೀಕ್ಷೆಗೆ ಈಗಾಗಲೇ ದಿನ ನಿಗದಿ ಮಾಡಿತ್ತು. 

ರಾಜ್ಯ ಸರಕಾರದ ನಿರ್ಧಾರವನ್ನು ಪ್ರಶ್ನಿಸಿರುವ ಹೈಕೋರ್ಟ್,  5 ಮತ್ತು 8 ನೇ ತರಗತಿ ಬೋರ್ಡ್ ಎಕ್ಸಾಂ ಆದೇಶ ರದ್ದು ಪಡಿಸಿದೆ. ಹೈಕೋರ್ಟಿನ ಈ ಆದೇಶದ ಬಳಿಕ ಆಯಾಯ ಶಾಲೆಗಳು ಹೊಸದಾಗಿ ಪರೀಕ್ಷೆ ದಿನಾಂಕ ನಿಗದಿಗೆ ಅವಕಾಶ ಮಾಡಿ ಕೊಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ 5 ಮತ್ತು 8 ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಬಹುದು ಎಂದು ಶಿಕ್ಷಣ ಇಲಾಖೆಗೆ ನ್ಯಾ.ಪ್ರದೀಪ್ ಸಿಂಗ್ ಯೆರೂರ್  ಸೂಚನೆ ನೀಡಿದ್ದಾರೆ.