ಕಾರ್ಕಳ ಹಿರ್ಗಾನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಕಾರು: ಕಾರಿನಲ್ಲಿದ್ದವರು ಅಪಾಯದಿಂದ ಪಾರು
Friday, March 17, 2023
ಕಾರ್ಕಳ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಮಣ್ಣಿನ ದಿಬ್ಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನದ ಗೊರಟ್ಟಿ ಚರ್ಚ್ ಬಳಿ ಇಂದು ನಡೆದಿದೆ.
ಕಾರಿನಲ್ಲಿದ್ದವರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಕಾರು ಹಿರ್ಗಾನ ಕಡೆ ಸಾಗುತ್ತಿತ್ತು. ಈ ವೇಳೆ ಗೊರಟ್ಟಿ ಚರ್ಚ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ದಿಬ್ಬಕ್ಕೆ ಕಾರು ಡಿಕ್ಕಿ ಹೊಡೆದು ಬಳಿಕ ಪಲ್ಟಿಯಾಗಿದೆ. ಇದರ ಪರಿಣಾಮ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.