ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಹೋಳಿ ಆಚರಣೆ, ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನಿರಾಕರಣೆ; ಕೊಟ್ಟ ಕಾರಣವೇನು ಗೊತ್ತೇ..?

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಹೋಳಿ ಆಚರಣೆ, ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನಿರಾಕರಣೆ; ಕೊಟ್ಟ ಕಾರಣವೇನು ಗೊತ್ತೇ..?

ಹುಬ್ಬಳ್ಳಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಹೋಳಿ ಆಚರಣೆ ಹಿನ್ನೆಲೆಯಲ್ಲಿ ಕಾಮಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಸಲ್ಲಿಸಲಾಗಿದ್ದ ಮನವಿಯನ್ನು ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ತಿರಸ್ಕರಿಸಿದೆ.

ಈದ್ಗಾ ಮೈದಾನವನ್ನು ಇತ್ತೀಚಿಗೆ ರಾಣಿ ಚೆನ್ನಮ್ಮ ಮೈದಾನ ಎಂದು ನಾಮಕರಣ ಮಾಡಲಾಗಿದ್ದು, ಹೋಳಿ ಆಚರಣೆಗಾಗಿ ಇಲ್ಲಿ ಮೂರ್ತಿ ಪ್ರತಿಷ್ಠಾಪನೆಗೆ ಗಜಾನನ ಉತ್ಸವ ಮಹಾಮಂಡಳ ಅನುಮತಿ ಕೋರಿತ್ತು. ಮೋದಿ ಭೇಟಿಯ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಮುಂದಿಟ್ಟು ಅನುಮತಿಯನ್ನು ನಿರಾಕರಿಸಲಾಗಿದೆ.

ಮಾರ್ಚ್ 12 ರಂದು ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿ- ಧಾರವಾಡ  ಅವಳಿ ನಗರಗಳಿಗೆ ಭೇಟಿ ನೀಡುತ್ತಿದ್ದು, ಪಾಲಿಕೆ ಆಯುಕ್ತ  ಬಿ ಗೋಪಾಲಕೃಷ್ಣ ಹಾಗು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರು ಮಹಾಮಂಡಲದ ಸದಸ್ಯರು ಹಾಗು ಇತರ ಹಿಂದೂ ಸಂಘಟನೆಗಳ ಮುಖಂಡರೊಂದಿಗೆ ಸಭೆ ನಡೆಸಿ ಈ ನಿರ್ಧಾರಕೈಗೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article