ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿದ ಸರಕಾರ: ರಾಜ್ಯ ಸರಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ವಾಪಸ್

ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿದ ಸರಕಾರ: ರಾಜ್ಯ ಸರಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ವಾಪಸ್

ಬೆಂಗಳೂರು: ಸರ್ಕಾರಿ ನೌಕರರ ವೇತನ ಶೇ.17ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, 2023ರ ಏಪ್ರಿಲ್ 1ರಿಂದ ನೂತನ ಆದೇಶ ಜಾರಿಯಾಗಲಿದ್ದು, ಇದರ ಬೆನ್ನಲ್ಲೇ ಬೆನ್ನಲ್ಲೇ ರಾಜ್ಯ ಸರಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ವಾಪಸ್ ಪಡೆದಿದ್ದಾರೆ.

ಸರ್ಕಾರದ ಆದೇಶದಲ್ಲಿ 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಲು ಸರಕಾರ ತೀರ್ಮಾನಿಸಿದ್ದು, 1ನೇ ಏಪ್ರಿಲ್ 2023ರಿಂದ ಜಾರಿಗೆ ಬರುವಂತೆ ಮೂಲ ವೇತನದ ಶೇಕಡಾ 17ರಷ್ಟು ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರಕಾರಿ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ವಾಪಸ್ ಪಡೆದ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ,  ಮಂಗಳವಾರ ಮುಖ್ಯಮಂತ್ರಿ ಬೊಮ್ಮಾಯಿ ಸೇರಿ 9 ಸಚಿವರ ಜೊತೆ ಸಭೆ ನಡೆಸಿದ್ದೆವು. ಇನ್ನು ರಾಜ್ಯ ಸರಕಾರ 2 ಆದೇಶ ಹೊರಡಿಸಿದ್ದು, ಅದಕ್ಕೆ ನಾವು ಒಪ್ಪಿದ್ದೇವೆ. ಈ ಕಾರಣದಿಂದ  ನಮ್ಮ ಪದಾಧಿಕಾರಿಗಳ ಸಭೆಯಲ್ಲಿ ಮುಷ್ಕರ ವಾಪಸ್ ಪಡೆಯುವ ಬಗ್ಗೆ ಒಮ್ಮತದ ತೀರ್ಮಾನ ಕೈಗೊಂಡಿದ್ದೇವೆ ಎಂದು ತಿಳಿಸಿದರು. 

ರಾಜ್ಯಾದ್ಯಂತ ನೌಕರರು ಮುಷ್ಕರ ಕೈ ಬಿಟ್ಟು ತಕ್ಷಣ ಸರಕಾರಿ ಕಚೇರಿಗಳಿಗೆ ಹಾಜರಾಗುವಂತೆ ಇದೇ ವೇಳೆ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮನವಿ ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article