ಗ್ಯಾಸ್ ಬೆಲೆ ಏರಿಕೆಗೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದೇನು...?
Wednesday, March 1, 2023
ನವದೆಹಲಿ: ಗ್ಯಾಸ್ ಬೆಲೆ ಏರಿಕೆಗೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಹೋಳಿ ಹಬ್ಬದ ಖಾದ್ಯ ಮಾಡುವುದು ಹೇಗೆಂದು ಜನ ಕೇಳುತ್ತಿದ್ದಾರೆ ಎಂದಿದ್ದಾರೆ.
ಟ್ವೀಟ್ ಮಾಡಿರುವ ಅವರು, ಹೋಳಿ ಹಬ್ಬಕ್ಕೂ ಮುನ್ನ ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ದೇಶದಲ್ಲಿ ಗೃಹಬಳಕೆಯ ಗ್ಯಾಸ್ ಬೆಲೆ 50 ರೂ., ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 350 ರೂ. ಏರಿಕೆಯಾಗಿದೆ. ಈಗ ಜನರು ಹೋಳಿ ಹಬ್ಬಕ್ಕೆ ಖಾದ್ಯಗಳನ್ನು ಹೇಗೆ ಮಾಡಬೇಕೆಂದು ಕೇಳುತ್ತಿದ್ದಾರೆ. ದೇಶದಲ್ಲಿ ಈ ಲೂಟಿಯ ಆದೇಶಗಳು ಎಷ್ಟು ದಿನ ಮುಂದುವರಿಯುತ್ತದೆ? ಖರ್ಗೆ ಪ್ರಶ್ನಿಸಿದ್ದಾರೆ.
ಮೋದಿ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿರುವ ಅಧಿಕ ಹಣದುಬ್ಬರದಿಂದ ಜನರು ನಲುಗಿ ಹೋಗುತ್ತಿದ್ದಾರೆ ಎಂದು ಆರೋಪಿಸಿದರು.