ಪತ್ನಿ, ಇಬ್ಬರೂ ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಪತಿ
Thursday, March 2, 2023
ಬೆಂಗಳೂರು: ವ್ಯಕ್ತಿಯೊಬ್ಬ ಹೆಂಡತಿ ಹಾಗೂ ಇಬ್ಬರು ಹೆಣ್ಣುಮಕ್ಕಳಿಗೆ ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ದಾರುಣ ಘಟನೆ ಗುರುವಾರ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ನಾಗೇಂದ್ರ, ತನ್ನ ಪತ್ನಿ ವಿಜಯ(28) ಹಾಗು ಮಕ್ಕಳಾದ ನಿಷಾ(7) ಹಾಗೂ ದೀಕ್ಷಾ(5) ಅವರನ್ನು ವಿಷವುಣಿಸಿ ಕೊಂದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ನಾಗೇಂದ್ರ ಊಟದಲ್ಲಿ ತಿಗಣಿ ಔಷಧಿ, ಇಲಿ ಔಷಧ ಬೇರಿಸಿ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿಗೆ ತಿನಿಸಿದ್ದಾನೆ. ಬಳಿಕ ತಾನೂ ಅದನ್ನು ಸೇವಿಸಿದ್ದು, ಆದರೆ ನಾಗೇಂದ್ರ ಬದುಕುಳಿದಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪ್ರಕರಣ ದಾಖಲಿಸಿರುವ ಕೋಣನಕುಂಟೆ ಪೊಲೀಸರು ತಿಳಿಸಿದ್ದಾರೆ.