40 ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರ!

40 ಲಕ್ಷ ರೂ.ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಪುತ್ರ!

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ವೇಳೆ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಶಾಸಕರ ಪುತ್ರ ಪ್ರಶಾಂತ್‌ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. ಟೆಂಡರ್ ಕೊಡಿಸುವ ವಿಚಾರಕ್ಕೆ ಸಂಬಂಧಿಸಿ ಗುತ್ತಿಗೆದಾರನಿಂದ 80 ಲಕ್ಷಕ್ಕೂ ಹೆಚ್ಚು ಹಣಕ್ಕೆ ಬೇಡಿಕೆ ಇಟ್ಟಿದ್ದು,  ಮುಂಗಡವಾಗಿ 40 ಲಕ್ಷಕ್ಕೂ ಹೆಚ್ಚು ಹಣ ಪಡೆದುಕೊಳ್ಳುವ ಸಂದರ್ಭದಲ್ಲಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ವೇಳೆ ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ. 

ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ವಸ್ತು ಖರೀದಿ ಸಂಬಂಧ ಟೆಂಡರ್‌ ಅನುಮೋದನೆಗೆ 80 ಲಕ್ಷ ರೂ. ಲಂಚ ನೀಡುವಂತೆ ಪ್ರಶಾಂತ್‌ ಬೇಡಿಕೆ ಇಟ್ಟಿದ್ದರು. ಗುರುವಾರ ಸಂಜೆ ಪ್ರಶಾಂತ್ ಮಾಡಲ್ ಗುತ್ತಿಗೆದಾರನಿಂದ  40 ಲಕ್ಷ ರೂ. ಪಡೆಯುತ್ತಿದ್ದಾಗ ಲೋಕಾಯುಕ್ತದ ಬೆಂಗಳೂರು ನಗರ ಘಟಕದ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. 

Ads on article

Advertise in articles 1

advertising articles 2

Advertise under the article