ಉಡುಪಿ 'ಮಲಬಾರ್ ಗೋಲ್ಡ್'ನಲ್ಲಿ ಮಹಿಳಾ ದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ
ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಬುಧವಾರ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ಸಾಧಕ ಮಹಿಳೆಯಾರನ್ನು ಗುರುತಿಸಿ ಸನ್ಮಾನಿಸುವ ಹಾಗು ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯೊಳಗೆ ನಡೆದ ಕಾರ್ಯಕ್ರಮದ ಆರಂಭದಲ್ಲಿ ಕೇಕ್ ಕತ್ತರಿಸುವ ಮೂಲಕ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಉಡುಪಿ ಶಿಶು ಅಭಿವೃದ್ಧಿ ಜಿಲ್ಲಾ ಯೋಜನಾ ಅಧಿಕಾರಿ ವೀಣಾ, ಮಹಿಳಾ ದಿನಾಚರಣೆ ಎಂದರೆ ಕೇವಲ ಒಂದು ದಿನದ ಆಚರಣೆ ಅಲ್ಲ, ಸಮಾಜದಲ್ಲಿ ಮಹಿಳೆಯರಿಗೆ ಸಿಗಬೇಕಾದ ಸಮಾನ ಗೌರವ, ಪ್ರತಿದಿನವೂ ಸಿಗುವಂತಾಗಬೇಕು. ಎಲ್ಲ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಮಹಿಎಳೆಯರನ್ನು ಕೀಳಾಗಿ ಕಾಣದೆ, ಸಾಮನರಂತೆ ಕಾಣುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಶ್ಮಿತಾ ಬಾಲಕೃಷ್ಣ ಶೆಟ್ಟಿ ಹಾಗು ಸಮಾಜ ಸೇವಕಿ ಸಿಂತಿಯ ಡಿಸೋಜ, ಡಾ. ಚರಿಷ್ಮ ಶೆಟ್ಟಿ ಈ ವೇಳೆ ಮಾತನಾಡಿದರು.
ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ನ್ಯಾಯಾಧೀಶರಾದ ಮುಮ್ತಾಜ್, ಸಫಲ್ಯ ಟ್ರಸ್ಟ್ ನ ಅಧ್ಯಕ್ಷೆಯಾದ ನಿರೂಪಮ ಪ್ರಸಾದ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತೆಯಾದ ಜನೆಟ್ ಬರ್ಬೋಜ, ಅಂತರಾಷ್ಟ್ರೀಯ ಕ್ರೀಡಾ ಹಾಗೂ ನೃತ್ಯ ಪಟು ಎಮ್.ಜೆ ಅರ್ಚನಾ, ಪವರ್ ಲಿಫ್ಟರ್ ಸುಮನ ಎಮ್ ಪೂಜಾರಿ ಅವರಿಗೆ ಈ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಉಡುಪಿಯ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್'ನ ಮುಖ್ಯಸ್ಥ ಹಫೀಝ್ ರೆಹಮಾನ್, ಪುರಂದರ ತಿಂಗಳಾಯ, ರಾಘವೇಂದ್ರ ನಾಯಕ್, ತಂಝಿಮ್ ಶಿರ್ವ ಸೇರಿದಂತೆ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿಘ್ನೇಶ್ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರೂಪಿಸಿ ವಂದಿಸಿದರು.