ಮಲ್ಪೆ ಬೀಚ್ ನಲ್ಲಿ ಮುಳುಗುತ್ತಿದ್ದ ಯುವತಿಯ ರಕ್ಷಣೆ
Thursday, March 2, 2023
ಮಲ್ಪೆ: ಸಮುದ್ರದ ಅಲೆಗೆ ಸಿಲುಕಿ ಮುಳುಗುತ್ತಿದ್ದ ಯುವತಿಯೋರ್ವಳನ್ನು ಲೈಫ್ ಗಾರ್ಡ್ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಇಂದು ಮಲ್ಪೆ ಬೀಚ್ ನಲ್ಲಿ ನಡೆದಿದೆ.
ಚಿತ್ರದುರ್ಗ ಮೂಲದ 16ವರ್ಷದ ಐಶ್ವರ್ಯ ರಕ್ಷಿಸಲ್ಪಟ್ಟ ಯುವತಿ. ಈಕೆ ಸಮುದ್ರ ತೀರದಲ್ಲಿ ಆಡುತ್ತಿದ್ದ ವೇಳೆ ಸಮುದ್ರದ ಅಲೆಗೆ ಸಿಲುಕಿ ನೀರಿನಲ್ಲಿ ಮುಳುಗುತ್ತಿದ್ದಳು. ಇದನ್ನು ಗಮನಿಸಿದ ಲೈಫ್ ಗಾರ್ಡ್ ಸಿಬ್ಬಂದಿ ತಕ್ಷಣವೇ ದೌಡಾಯಿಸಿ ಯುವತಿಯನ್ನು ರಕ್ಷಿಸಿ ದಡಕ್ಕೆ ತಂದಿದ್ದಾರೆ. ಬಳಿಕ ಆಕೆಯನ್ನು ಸಮಾಜ ಸೇವಕ ಈಶ್ವರ್ ಮಲ್ಪೆ ಅವರ ಆ್ಯಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಸದ್ಯ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ಧಾಳೆ ಎಂದು ತಿಳಿದುಬಂದಿದೆ.