ಮಂಗಳೂರಿನ ಮರೋಳಿಯಲ್ಲಿ ಹೋಳಿ ಆಚರಣೆ ವೇಳೆ ಸಂಘಪರಿವಾರದ ಕಾರ್ಯಕರ್ತರಿಂದ ದಾಳಿ; ಕಾರ್ಯಕ್ರಮಕ್ಕೆ ಅಡ್ಡಿ

ಮಂಗಳೂರಿನ ಮರೋಳಿಯಲ್ಲಿ ಹೋಳಿ ಆಚರಣೆ ವೇಳೆ ಸಂಘಪರಿವಾರದ ಕಾರ್ಯಕರ್ತರಿಂದ ದಾಳಿ; ಕಾರ್ಯಕ್ರಮಕ್ಕೆ ಅಡ್ಡಿ

                                                                

ಮಂಗಳೂರು: ಮಂಗಳೂರಿನ ಮರೋಳಿ ಎಂಬಲ್ಲಿ 'ರಂಗ್ ದೇ ಬರ್ಸಾ' ಹೆಸರಿನಲ್ಲಿ  ಯುವಕ ಯುವತಿಯರಿಗಾಗಿ ಆಯೋಜಿಸಲಾಗಿದ್ದ ಹೋಳಿ ಆಚರಣೆ ವೇಳೆ ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿ ಅಡ್ಡಿಪಡಿಸಿದ್ದಾರೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮರೋಳಿಯ 'ಸೂರ್ಯ ವುಡ್ಸ್ 'ನಲ್ಲಿ ಅರ್ಜುನ್ ಎಂಬವರು ಹೋಳಿ ಆಚರಣೆಗೆ ಅನುಮತಿ ಪಡೆದು ಕಾರ್ಯಮ್ರಮ ಆಯೋಜಿಸಿದ್ದರು. ರವಿವಾರ ಮಧ್ಯಾಹ್ನ ಕೆಲ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಹೋಳಿ ಆಚರಣೆಯಲ್ಲಿ ತೊಡಗಿದ್ದರು. ಈ ವೇಳೆ ಸಂಘಪರಿವಾರದ ಕಾರ್ಯಕರ್ತರು ದಾಳಿ ನಡೆಸಿ ಅಡ್ಡಿಪಡಿಸಿದ್ದಾರೆ. ಈ ಕಾರ್ಯಕ್ರಮದ ಕುರಿತು ಅಳವಡಿಸಿದ್ದ ಬ್ಯಾನರ್ ಗಳನ್ನು ಹರಿದು ಹಾಕಿದ್ದು, ಅಲ್ಲಿದ್ದ ವಿದ್ಯಾರ್ಥಿಗಳೊಂದಿಗೆ ವಾಗ್ವಾದಕ್ಕಿಳಿದಿದ್ದಾರೆ. ಇದರಿಂದ ಕಾರ್ಯಕ್ರಮ ಆಯೋಜಕರು ಹಾಗೂ ಸಂಘಪರಿವಾರದ ಕಾರ್ಯಕರ್ತರ ನಡುವೆ ಮಾತಿನ ಚಕ್ಕಮಕಿ ನಡೆಯಿತು ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.

ಮಾಹಿತಿ ಅರಿತು ಘಟನಾ ಸ್ಥಳಕ್ಕೆ ಕಂಕನಾಡಿ ಠಾಣೆಯ ಪೊಲೀಸರು ದೌಡಾಯಿಸಿದ್ದು, 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. 

ಮರೋಳಿಯಲ್ಲಿ ಗಲಾಟೆ ನಡೆಯುತ್ತಿರುವ ಬಗ್ಗೆ ಮಾಹಿತಿ ಬಂದಿದ್ದು, ಘಟನಾ ಸ್ಥಳಕ್ಕೆ ಹೋಗಿ ನೋಡಿದಾಗ ಕೆಲವರು ಬ್ಯಾನರ್ ಗಳನ್ನು ಹರಿದಿದ್ದು, ಈ ರೀತಿ ದಾಂದಲೆ ನಡೆಸಿದ 6 ಮಂದಿಯನ್ನು ವಶಕ್ಕೆ ಪಡೆದಿದ್ದೇವೆ. ದಾಳಿಯ ಹಿನ್ನೆಲೆಯಲ್ಲಿ ಆಯೋಜಕರು ಕಾರ್ಯಕ್ರಮವನ್ನು ರದ್ದು ಪಡಿಸಿದ್ದಾರೆ ಎನ್ನಲಾಗಿದೆ.

Ads on article

Advertise in articles 1

advertising articles 2

Advertise under the article