ಅತ್ಯುತ್ತಮ ಹಾಡು ವಿಭಾಗದಲ್ಲಿ 'ನಾಟು ನಾಟು' ಹಾಡಿಗೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿ
Monday, March 13, 2023
ಲಾಸ್ ಏಂಜಲೀಸ್: ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗಳು ಘೋಷಣೆಯಾಗಿದ್ದು, ಭಾರತದ ಮುಕುಟಕ್ಕೆ ಮತ್ತೊಂದು ಗರಿ ಸಿಕ್ಕಿದೆ. ಅತ್ಯುತ್ತಮ ಹಾಡು ವಿಭಾಗದಲ್ಲಿ ಎಸ್.ಎಸ್.ರಾಜಮೌಳಿ ಅವರ ಆರ್ ಆರ್ ಆರ್ ಚಿತ್ರದ ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.
‘ನಾಟು ನಾಟು..’, ‘ಲಿಫ್ಟ್ ಮಿ ಅಪ್’, ‘ದಿಸ್ ಈಸ್ ಲೈಫ್’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್ ಮೊದಲಾದ ಹಾಡುಗಳು ಆಸ್ಕರ್ ರೇಸ್ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡಿಗೆ ಆಸ್ಕರ್ ಪ್ರಶಸ್ತಿ ಲಭ್ಯವಾಗಿದೆ.
ನಾಟು ನಾಟು ಹಾಡಿಗೆ ಆಸ್ಕರ್ ಪ್ರಶಸ್ತಿ ಘೋಷಣೆ ಆಗುತ್ತಿದ್ದಂತೆಯೇ ಸಭಾಂಗಣದ ತುಂಬಾ ಚೆಪ್ಪಾಳೆಯ ಸದ್ದು, ಸೀಟಿ ಜೋರಾಗಿತ್ತು. ಭಾರತದಲ್ಲೂ ರಾಮ್ ಚರಣ್ ಹಾಗು ಜ್ಯೂನಿಯರ್ ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದುಕುಪ್ಪಳಿಸಿ ಸಂಭ್ರಮಿಸಿದ್ದಾರೆ.