ಲೋಕಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಂಡ ರಾಹುಲ್ ಗಾಂಧಿ !
Friday, March 24, 2023
ನವದೆಹಲಿ: ಮಾನಹಾನಿ ಪ್ರಕರಣದಲ್ಲಿ 2 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಶುಕ್ರವಾರ ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.
ಮೋದಿ ಉಪನಾಮದ ಕುರಿತು ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ 2 ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಕಾರಣಕ್ಕಾಗಿ ಕೇರಳದ ವಯನಾಡು ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.