ಸಲ್ಮಾನ್ ಖಾನ್ ಮನೆಯ ಮುಂದೆ ನಿಲ್ಲುವಂತಿಲ್ಲ, ಸುಖಾಸುಮ್ಮನೆ ಓಡಾಡುವಂತಿಲ್ಲ: ಪೊಲೀಸ್ ಇಲಾಖೆಯಿಂದ ಆದೇಶ
ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್'ಗೆ ಕೊಲೆ ಬೆದರಿಕೆ ಹಿನ್ನೆಲೆಯಲ್ಲಿ ಅವರ ಬಾಂದ್ರಾದಲ್ಲಿರುವ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಗೆ ಮುಂಬೈ ಪೊಲೀಸರು ಬಿಗಿ ಸೆಕ್ಯೂರಿಟಿ ನೀಡಿದ್ದಾರೆ. ಜೊತೆಗೆ ಸಲ್ಮಾನ್ ಖಾನ್ ಅವರ ಮನೆಯ ಮುಂದೆ ಸುಖಾಸುಮ್ಮನೆ ಓಡಾಡುವಂತಿಲ್ಲ ಹಾಗೂ ಮನೆಯ ಮುಂದೆ ನಿಲ್ಲುವಂತಿಲ್ಲ ಎಂದು ಮುಂಬೈ ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.
ಬೆದರಿಕೆ ಇರುವ ಕಾರಣಕ್ಕೆ ರವಿವಾರದಿಂದ ಮನೆ ಸುತ್ತಮುತ್ತ ತಪಾಸಣೆ ಕಾರ್ಯವನ್ನೂ ಪೊಲೀಸರು ಆರಂಭಿಸಿದ್ದು, ಯಾವುದೇ ಬಹಿರಂಗ ಕಾರ್ಯಕ್ರಮದಲ್ಲಿ ಭಾಗಿಯಾಗದಂತೆ ಸಲ್ಮಾನ್ ಖಾನ್'ಗೆ ಪೊಲೀಸರು ತಿಳಿಸಿದ್ದಾರೆ.
ಸಲ್ಮಾನ್ ಖಾನ್ ಅವರನ್ನು ಕುಖ್ಯಾತ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಎಂಬಾತ ಕೊಲ್ಲುವುದಾಗಿ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ರಕ್ಷಣೆಯ ಕ್ರಮಗಳನ್ನು ತಗೆದುಕೊಳ್ಳಲು ಮುಂದಾಗಿದ್ದಾರೆ.
ಈ ಹಿಂದೆ ಶೂಟಿಂಗ್ ವೇಳೆ ಕೃಷ್ಣಮೃಗ ಕೊಂದ ಹಿನ್ನೆಲೆಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್ಮ ಹಾಗು ಬಾಲಿವುಡ್ ನಟ ಸಲ್ಮಾನ್ ಖಾನ್ ನಡುವಿನ ಕಾಳಗ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ. ಈಗಾಗಲೇ ಹಲವು ಬಾರಿ ಸಲ್ಮಾನ್ ಖಾನ್ ಕೊಲ್ಲಲು ಬಿಷ್ಣೋಯ್ ಹಾಗು ಆತನ ಟೀಮ್ ಪ್ರಯತ್ನ ಮಾಡಿ ವಿಫಲವಾಗಿದ್ದು, ಹಲವರನ್ನು ಪೊಲೀಸರು ಬಂದಿಸಿಯೂ ಆಗಿದೆ.