ಬಾಲಿವುಡ್ ನಟ ಸಲ್ಮಾನ್ ಖಾನ್'ನನ್ನು ಹತ್ಯೆ ಮಾಡುವುದೇ ನನ್ನ ಗುರಿ ಎಂದ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್
ಮುಂಬೈ: ಕೃಷ್ಣಮೃಗ ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಸಮರಕ್ಕಿಳಿದಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯ್, ಜೈಲಿನಿಂದಲೇ ಮತ್ತೆ ಕೊಳ್ಳುವ ಬೆದರಿಕೆಯೊಡ್ಡಿದ್ದಾನೆ.
ಈಗಾಗಲೇ ಸಲ್ಮಾನ್ ಖಾನ್ ಕೊಲ್ಲಲು ಬಿಷ್ಣೋಯ್ ಹಾಗು ಆತನ ತಂಡ ಹಲವು ರೀತಿಯಲ್ಲಿ ಪ್ರಯತ್ನ ಮಾಡಿ ವಿಫಲವಾಗಿದೆ. ಕೊಲೆಯತ್ನ ಸಂಬಂಧವಾಗಿ ಅನೇಕರು ಬಂಧನ ಕೂಡ ಆಗಿದ್ದಾರೆ. ಈಗ ಬಿಷ್ಣೋಯ್ ಜೈಲಿನಲ್ಲೇ ಇದ್ದುಕೊಂಡೇ ಸಲ್ಮಾನ್ ಖಾನ್ ಅವರನ್ನು ಕೊಳ್ಳುವ ಬೆದರಿಕೆ ಹಾಕಿದ್ದಾನೆ.
ಸಲ್ಮಾನ್ ಖಾನ್ ಅವರನ್ನು ಕೊಲ್ಲಲು ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ನೋಯ್ ಮೊದಲಿನಿಂದಲೂ ಸಂಚು ರೂಪಿಸುತ್ತಲೇ ಇದ್ದಾನೆ. ಈಗ ಸಲ್ಲುನ ಕೊಂದೇ ತೀರುವುದಾಗಿ ಮತ್ತೊಮ್ಮೆ ಬೆದರಿಕೆ ಒಡ್ಡಿದ್ದಾನೆ.
1998ರಲ್ಲಿ ‘ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್ಗಾಗಿ ಸಲ್ಮಾನ್ ಖಾನ್ ರಾಜಸ್ಥಾನದ ಜೋಧ್‌ಪುರಕ್ಕೆ ಹೋಗಿದ್ದ ವೇಳೆ ಸಫಾರಿಗೆ ಹೋಹಿದ್ದಾಗ ಒಂದು ಕೃಷ್ಣ ಮೃಗವನ್ನು ಬೇಟೆಯಾಡಿದ್ದರು. ಬಿಷ್ಣೋಯ್ ಸಮುದಾಯದವರು ಪ್ರಕೃತಿ ಆರಾಧಕರಾಗಿದ್ದು, ಇವರು ಕೃಷ್ಣಮೃಗವನ್ನು ತಮ್ಮ ಧಾರ್ಮಿಕ ಗುರು ಭಗವಾನ್ ಜಂಬೇಶ್ವರ ಅವರ ಪುನರ್ಜನ್ಮ ಎಂದು ಪರಿಗಣಿಸುತ್ತಾರೆ. ಈ ಕಾರಣದಿಂದ ಕೃಷ್ಣಮೃಗ ಕೊಂದ ಸಲ್ಮಾನ್ ಖಾನ್ ಹತ್ಯೆ ಮಾಡಲು ಲಾರೆನ್ಸ್ ಬಿಷ್ಣೋಯ್ ನಿರ್ಧರಿಸಿದ್ದ ಎಂದು ಹೇಳಲಾಗಿದೆ.