ಕೋಲಾರದಿಂದ ಸ್ಪರ್ಧಿಸಲು ಸಿದ್ದರಾಮಯ್ಯ ಹಿಂದೇಟು: ಮನೆಯ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಹೈಡ್ರಾಮಾ; ಸ್ಪರ್ಧಿಸದಿದ್ದರೆ ಆತ್ಮಹತ್ಯೆಯ ಎಚ್ಚರಿಕೆ ನೀಡಿದ ಅಭಿಮಾನಿ
ಬೆಂಗಳೂರು: ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡುವ ಬಗ್ಗೆ ಇದೀಗ ಗೊಂದಲವೆದ್ದಿರುವುದರಿಂದ ಸಿದ್ದರಾಮಯ್ಯ ಮನೆ ಮುಂದೆ ಮಂಗಳವಾರ ರಾಜಕೀಯ ಹೈಡ್ರಾಮಾ ನಡೆದಿದ್ದು, ಕೋಲಾರ ಕ್ಷೇತ್ರದಲ್ಲೇ ಸಿದ್ದರಾಮಯ್ಯ ಸ್ಪರ್ಧಿಸಬೇಕು ಎಂದು ಅಭಿಮಾನಿಗಳು ಪಟ್ಟು ಹಿಡಿದಿದ್ದು, ಕೋಲಾರದಿಂದ ಸ್ಪರ್ಧಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ಸಿದ್ದರಾಮಯ್ಯ, ಈ ಬಾರಿ ಅಲ್ಲಿ ಸ್ಪರ್ಧಿಸುವುದಿಲ್ಲ ಎಂದು ಆರಂಭದಲ್ಲಿಯೇ ಹೇಳಿದ್ದರು.ಈ ಬಾರಿ ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಹೋಗಿ ಅಲ್ಲಿ ಘೋಷಣೆ ಮಾಡಿ ಸರ್ವೆ ಮಾಡಿಸಿ, ಅಲ್ಲಿನ ಚುನಾವಣಾ ವಾತಾವರಣ ತಮಗೆ ಅನುಕೂಲವಾಗಿಲ್ಲ ಎಂದು ಹಿಂದೇಟು ಹಾಕುತ್ತಿದ್ದು, ಇದರಿಂದ ಗೊಂದಲ ಉಂಟಾಗಿದ್ದು, ತಮ್ಮ ಸ್ಪರ್ಧೆ ಹೈಕಮಾಂಡ್ ಗೆ ಬಿಟ್ಟ ವಿಚಾರ, ಹೈಕಮಾಂಡ್ ಹೇಳಿದಲ್ಲಿ ನಿಲ್ಲುತ್ತೇನೆ ಎಂದಿದ್ದಾರೆ.
ಇದರಿಂದ ಬೇಸರಗೊಂಡಿತುವ ಕೋಲಾರದಿಂದ ಬಂದ ಸಿದ್ದರಾಮಯ್ಯ ಅಭಿಮಾನಿಯೊಬ್ಬ, ಶರ್ಟ್ ಬಿಚ್ಚಿ ಬಾರುಕೋಲಿನಿಂದ ಹೊಡೆದುಕೊಂಡು ತಮ್ಮ ಬೆಂಬಲವನ್ನು ಸೂಚಿಸಿದ್ದು ವಿಚಿತ್ರವಾಗಿತ್ತು. ಸಿದ್ದರಾಮಯ್ಯ ನಿವಾಸದ ಮುಂದೆ ಕಾರ್ಯಕರ್ತರು ದಂಡೇ ಜಮಾಯಿಸಿದೆ.