ಪುತ್ರ ಲಂಚ ಪಡೆಯುವ ವೇಳೆ ಸಿಕ್ಕಿ ಬಿದ್ದ ಹಿನ್ನೆಲೆ: KSDL ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಪುತ್ರ ಲಂಚ ಪಡೆಯುವ ವೇಳೆ ಸಿಕ್ಕಿ ಬಿದ್ದ ಹಿನ್ನೆಲೆ: KSDL ನಿಗಮ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಬೆಂಗಳೂರು: ಪುತ್ರ ಲಂಚ ಪಡೆಯುವ ವೇಳೆ ಸಿಕ್ಕಿ ಬಿದ್ದ ಹಿನ್ನೆಲೆಯಲ್ಲಿ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ

ಗುರುವಾರ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ BWSSB ಮುಖ್ಯ ಲೆಕ್ಕಾಧಿಕಾರಿ KAS ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ನ್ಯಾಯಾಂಗ ಬಂಧನವಾಗಿದೆ.

ಬಳಿಕ ಲೋಕಾಯುಕ್ತ ಅಧಿಕಾರಿಗಳು, ಸಿಬ್ಬಂದಿಗಳು ಮಾಡಾಳ್ ಪ್ರಶಾಂತ್ ಅವರ ನಿವಾಸ ಮತ್ತು ಕಚೇರಿ ಮೇಲೆ  ರಾತ್ರಿಯಿಂದ ಇಂದು ಬೆಳಗಿನವರೆಗೆ ನಡೆಸಿದ ಸತತ ಕಾರ್ಯಾಚರಣೆ ಮತ್ತು ಶೋಧದ ವೇಳೆ 6 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಅದನ್ನು ವಶ ಪಡಿಸಿಕೊಂಡಿದ್ದಾರೆ.

ಈ ಬೆಳವಣಿಗೆಯ ಮಧ್ಯೆ ಪ್ರತಿಪಕ್ಷ ಕಾಂಗ್ರೆಸ್ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂತ್ತಲ್ಲದೆ ಸಿಎಂ ಬೊಮ್ಮಾಯಿಯಾ ರಾಜೀನಾಮೆಗೂ ಒತ್ತಾಯಿಸಿದೆ. ಇದರಿಂದ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದ್ದು, ತಪ್ಪಿಸಿಕೊಳ್ಳುವ ಉದ್ದೇಶದಿಂದ ಶಾಸಕ ಮಾಡಾಳ್ ವಿರೂಪಾಕ್ಷಪ್ಪರಿಂದ ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಿದೆ ಎಂದು ಹೇಳಲಾಗುತ್ತಿದೆ.

ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿಗಳಿಂದ ಸೂಚನೆ ಬಂದ ಕೂಡಲೇ ಮಾಡಾಳ್ ವಿರೂಪಾಕ್ಷಪ್ಪ KSDL ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ, ನನ್ನ ಮತ್ತು ನನ್ನ ಕುಟುಂಬದ ವಿರುದ್ದ ಚುನಾವಣೆ ಹೊತ್ತಿನಲ್ಲಿ ಷಡ್ಯಂತ್ರ ನಡೆಸಲಾಗಿದ್ದು, ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ವಿರೂಪಾಕ್ಷಪ್ಪ ಹೇಳಿದ್ದಾರೆ. 

Ads on article

Advertise in articles 1

advertising articles 2

Advertise under the article