ಉತ್ತರಪ್ರದೇಶದಲ್ಲಿ ಕೇವಲ 6 ವರ್ಷಗಳಲ್ಲಿ 10,000ಕ್ಕೂ ಹೆಚ್ಚು ಎನ್‌ಕೌಂಟರ್‌; 63 ಕ್ರಿಮಿನಲ್‌ಗಳ ಹತ್ಯೆ

ಉತ್ತರಪ್ರದೇಶದಲ್ಲಿ ಕೇವಲ 6 ವರ್ಷಗಳಲ್ಲಿ 10,000ಕ್ಕೂ ಹೆಚ್ಚು ಎನ್‌ಕೌಂಟರ್‌; 63 ಕ್ರಿಮಿನಲ್‌ಗಳ ಹತ್ಯೆ

ಉತ್ತರಪ್ರದೇಶ: ಉತ್ತರಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರಕಾರ ಕಳೆದ 6 ವರ್ಷಗಳಲ್ಲಿ 10,000 ಕ್ಕೂ ಹೆಚ್ಚು ಎನ್‌ಕೌಂಟರ್‌ಗಳು ನಡೆದಿದ್ದು, ಇದರಲ್ಲಿ 63 ಕ್ರಿಮಿನಲ್‌ಗಳು ಸಾವನ್ನಪ್ಪಿದ್ದಾರೆ.

ಈ ಅಂಕಿ ಅಂಶವನ್ನು ಉತ್ತರ ಪ್ರದೇಶ ಸರ್ಕಾರ ಬಹಿರಂಗಪಡಿಸಿದ್ದು, ಉತ್ತರಪ್ರದೇಶದಲ್ಲಿ ಪೊಲೀಸ್ ಎನ್‌ಕೌಂಟರ್‌ಗಳ ಸಂಖ್ಯೆಗೆ ಸಂಬಂಧಿಸಿದಂತೆ, ಮೀರತ್'ನಲ್ಲಿ  2017 ರಿಂದ ಅತಿ ಹೆಚ್ಚು ಅಂದರೆ 3152 ಎನ್‌ಕೌಂಟರ್‌ಗಳು ನಡೆದಿದ್ದು, ಅಗ್ರಸ್ಥಾನದಲ್ಲಿದೆ. ಇಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 63 ಅಪರಾಧಿಗಳುಕೊಲ್ಲಲ್ಪಟ್ಟಿದ್ದು, 1708 ಅಪರಾಧಿಗಳು ಗಾಯಗೊಂಡಿದ್ದಾರೆ ಎಂದು ಅಂಕಿ ಅಂಶ ಹೇಳಿದೆ.

ಪೊಲೀಸ್ ಎನ್‌ಕೌಂಟರ್‌ನಲ್ಲಿ ಒಬ್ಬ ಪೊಲೀಸ್ ಹುತಾತ್ಮರಾಗಿದ್ದು, 401 ಪೊಲೀಸರು ಗಾಯಗೊಂಡಿದ್ದಾರೆ. ಜೊತೆಗೆ ಯುಪಿ ಪೊಲೀಸರ ಕಾರ್ಯಾಚರಣೆಯಲ್ಲಿ ಒಟ್ಟು 5,967 ಅಪರಾಧಿಗಳನ್ನು ಬಂಧಿಸಲಾಗಿದೆ. ಸರ್ಕಾರ ಬಿಡುಗಡೆ ಮಾಡಿದ ಅಂಕಿಅಂಶಗಳಲ್ಲಿ, 2017 ರಿಂದ ಉತ್ತರಪ್ರದೇಶ ಪೊಲೀಸರು 10,713 ಎನ್‌ಕೌಂಟರ್‌ಗಳನ್ನು ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಇದರಲ್ಲಿ ಗರಿಷ್ಠ 3152 ಅನ್ನು ಮೀರತ್ ಪೊಲೀಸರು ಮಾಡಿದ್ದಾರೆ.

Ads on article

Advertise in articles 1

advertising articles 2

Advertise under the article