ದ್ವಿತೀಯ PUC ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಪ್ರಥಮ- ಉಡುಪಿ ದ್ವಿತೀಯ-ಕೊನೆಯ ಸ್ಥಾನದಲ್ಲಿ ಯಾದಗಿರಿ: ಶೇ.74.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ದ್ವಿತೀಯ PUC ಫಲಿತಾಂಶ ಪ್ರಕಟ; ದಕ್ಷಿಣ ಕನ್ನಡ ಪ್ರಥಮ- ಉಡುಪಿ ದ್ವಿತೀಯ-ಕೊನೆಯ ಸ್ಥಾನದಲ್ಲಿ ಯಾದಗಿರಿ: ಶೇ.74.67 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ ಶುಕ್ರವಾರ ಪ್ರಕಟವಾಗಿದೆ. ದಕ್ಷಿಣ ಕನ್ನಡ ಪ್ರಥಮ ಸ್ಥಾನದಲ್ಲಿದ್ದರೆ, ಉಡುಪಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಯಾದಗಿರಿಗೆ ಕೊನೆಯ ಸ್ಥಾನ ದಕ್ಕಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಫಲಿತಾಂಶ ಪ್ರಕಟ ಮಾಡಿದ್ದು, ಈ ಬಾರಿಯ ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದರು.

ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ 2ನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದ್ದು, ಕೊನೆಯ ಸ್ಥಾನದಲ್ಲಿ ಯಾದಗಿರಿ (78.97%) ಇದೆ. 

ಎಂದಿನಂತೆ ಈ ಬಾರಿಯೂ ಬಾಲಕೀಯರೇ ಮೇಲುಗೈ ಸಾಧಿಸಿದ್ದು, 80.25% ಪಾಸ್ ಆಗಿದ್ದರೆ ಬಾಲಕರು 69.05% ಪಾಸ್‌ ಆಗಿದ್ದಾರೆ. ರಾಜ್ಯದ ಗ್ರಾಮೀಣ ಭಾಗದ 74.79% ಮಕ್ಕಳು ತೇರ್ಗಡೆಯಾಗಿದ್ದರೆ 74.63% ನಗರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಈ ಬಾರಿ ಪರೀಕ್ಷೆಗೆ 727,923 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಈ ಪೈಕಿ 725,821 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ. ರಾಜ್ಯದ 23,754 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಪರೀಕ್ಷೆಗೆ ಗೈರಾಗಿದ್ದಾರೆ. 702,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 524,209 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 2023 ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,02,067 ವಿದ್ಯಾರ್ಥಿಗಳು ಹಾಜರಾಗಿದ್ದರು.  ರಾಜ್ಯದ ಒಟ್ಟು 61 ಕೇಂದ್ರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು.

ದ್ವಿತೀಯ ಪಿಯುಸಿಯ ಕಲಾ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 1,34,876. ಕಲಾ ವಿಭಾಗದಲ್ಲಿ ಶೇಕಡಾ 61.22ರಷ್ಟು ಫಲಿತಾಂಶ ಬಂದಿದ್ದು,  ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು KSEEB ಯ ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ಫಲಿತಾಂಶಗಳನ್ನು ನೋಡಬಹುದಾಗಿದೆ.

ವಿದ್ಯಾರ್ಥಿಗಳು ಫಲಿತಾಂಶವನ್ನು 11 ಗಂಟೆಗೆ KSEEB ಯ ಅಧಿಕೃತ ವೆಬ್‌ಸೈಟ್‌ನಲ್ಲಿ (karresults.nic.in.) ಲಭ್ಯವಿರುತ್ತವೆ ಹಾಗು ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಇತರ ಅಗತ್ಯ ವಿವರಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.

Ads on article

Advertise in articles 1

advertising articles 2

Advertise under the article