ಕಾವೂರಿನ ಶಾಂತಿನಗರದಲ್ಲಿ ಕಾಂಗ್ರೆಸ್ ಸಾರ್ವಜನಿಕ ಸಭೆ: ಇನಾಯತ್ ಅಲಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ವಿವಿಧ ಪಕ್ಷಗಳ ಮುಖಂಡರು
Sunday, April 23, 2023
ಮಂಗಳೂರು: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾವೂರಿನ ಶಾಂತಿನಗರದಲ್ಲಿ ರವಿವಾರ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ನೇತೃತ್ವದಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷ 4 ಗ್ಯಾರಂಟಿಗಳ ಮೂಲಕ ಜನಪರ ಆಡಳಿತ ನೀಡಲು ಬದ್ಧವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಭರವಸೆ ನೀಡಿದರು.
ಈ ವೇಳೆ ವಿವಿಧ ಪಕ್ಷಗಳ ಹಲವು ಮಂದಿ ಮುಖಂಡರು, ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಇನಾಯತ್ ಅಲಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.