ಸಭೆ, ಸಾರ್ವಜನಿಕ ಪ್ರಚಾರದ ಮೂಲಕ ಮತ ಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ

ಸಭೆ, ಸಾರ್ವಜನಿಕ ಪ್ರಚಾರದ ಮೂಲಕ ಮತ ಯಾಚಿಸಿದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ

ಸುರತ್ಕಲ್: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಶನಿವಾರ ಭರ್ಜರಿ ಪ್ರಚಾರ ನಡೆಸಿದರು. ಕ್ಷೇತ್ರದ ಹಲವು ಕಡೆ ಸಭೆ, ಮನೆ ಮನೆ ಪ್ರಚಾರ ನಡೆಸುವ ಮೂಲಕ ಮತ ಯಾಚಿಸಿದರು.



ಮುಚುರ್ ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ಸಭೆ ನಡೆಸಿ ಮಾತನಾಡಿದ ಇನಾಯತ್ ಅಲಿ, ಜನರ ಸಮಸ್ಯೆಗಳನ್ನು ಪರಿಹರಿಸಲು ಕಾಂಗ್ರೆಸ್ ಪಣ ತೊಟ್ಟಿದ್ದು, ಜನಪರ ಆಡಳಿತ ನೀಡಲು ಬದ್ಧವಾಗಿದೆ. ನಿಮ್ಮ ಒಂದು ಮತ ಹೊಸ ಬದಲಾವಣೆಗೆ ನಾಂದಿ ಹಾಡಲಿದ್ದು, ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಜನರಲ್ಲಿ ಮನವಿ ಮಾಡಿದರು.

ಅದ್ಯಪಾಡಿಯಲ್ಲಿರುವ ಅಂಬೇಡ್ಕರ್ ಭವನದಲ್ಲಿ ಶನಿವಾರ ಸಭೆ ನಡೆಸಿ, ಮಾತನಾಡಿದ ಇನಾಯತ್ಕ್ಷೇ ಅಲಿ, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಜನರಲ್ಲಿ ಕೋರಿದರು.ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ರಂಗಣ್ಣ ಅದ್ಯಪಾಡಿರವರು ಕಾಂಗ್ರೆಸ್ ತತ್ವ ಸಿದ್ಧಾಂತ ನಂಬಿ ಪಕ್ಷ ಸೇರ್ಪಡೆಗೊಂಡರು. ಅವರನ್ನು ಇನಾಯತ್ಪ ಅಲಿ ಪಕ್ಷಕ್ಕೆ ಆತ್ಮೀಯವಾಗಿ ಬರಮಾಡಿಕೊಂಡರು.

Ads on article

Advertise in articles 1

advertising articles 2

Advertise under the article