ತಲೆಮರೆಸಿಕೊಂಡಿದ್ದ ಖಲಿಸ್ತಾನಿ ಮೂಲಭೂತವಾದಿ, ಧರ್ಮ ಪ್ರಚಾರಕ ಅಮೃತ್ ಪಾಲ್ ಸಿಂಗ್ ಬಂಧನ
Sunday, April 23, 2023
ಚಂಡೀಗಢ: ತಲೆಮರೆಸಿಕೊಂಡಿದ್ದ ಖಲಿಸ್ತಾನಿ ಮೂಲಭೂತವಾದಿ, ಧರ್ಮ ಪ್ರಚಾರಕ ಅಮೃತ್ ಪಾಲ್ ಸಿಂಗ್ ನನ್ನು ಪಂಜಾಬ್ ನ ಮೋಗಾದಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.
ಕಳೆದ 1 ತಿಂಗಳಿಗೂ ಹೆಚ್ಚು ಸಮಯದಿಂದ ಪಂಜಾಬ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಅಮೃತ್ಪಾಲ್ ಸಿಂಗ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ.
ಇತ್ತೀಚೆಗಷ್ಟೇ ಅಮೃತ್ಪಾಲ್ ಸಿಂಗ್ ಪತ್ನಿಯನ್ನು ಪೊಲೀಸರು ವಶಕ್ಕೆ ಪಡೆಡಿದ್ದರು. ಕಿರಣ್ ದೀಪ್ ಕೌರ್ ಅವರು (ಏಪ್ರಿಲ್ 20) ಲಂಡನ್ ಗೆ ವಿಮಾನ ಹತ್ತಲು ಪ್ರಯತ್ನಿಸುತ್ತಿದ್ದಾಗ ಅಮೃತಸರದ ಶ್ರೀ ಗುರು ರಾಮ್ ದಾಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೊಲೀಸ್ ಅಧಿಕಾರಿಗಳು ತಡೆದು ವಿಚಾರಣೆ ನಡೆಸಿದ್ದು, ನಂತರ ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.