ಮಹಿಳೆಯೊಂದಿಗಿರುವ ಬಿಜೆಪಿ ಶಾಸಕನ ಖಾಸಗಿ ಫೋಟೋ ವೈರಲ್: ಪೊಲೀಸರಿಗೆ ದೂರು ನೀಡಿದ ಬಿಜೆಪಿ ಶಾಸಕ ಸಂಜೀವ ಮಠಂದೂರು
Thursday, April 6, 2023
ಬೆಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಹಾಲಿ ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರದ್ದೆನ್ನಲಾದ ಅಪರಿಚಿತ ಮಹಿಳೆಯೊಂದಿಗಿರುವ ಖಾಸಗಿ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಬಿಜೆಪಿ ಶಾಸಕ ಸಂಜೀವ ಮಠಂದೂರು ಗುರುವಾರ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಬಾರಿಯ ಚುನಾವಣೆಯಲ್ಲಿ ತನ್ನನ್ನು ಮೂಲೆಗುಂಪು ಮಾಡುವ ಪಿತೂರಿಯ ಭಾಗವಾಗಿ ಫೋಟೊಗಳನ್ನು ಎಡಿಟ್ ಮಾಡಿ ವೈರಲ್ ಮಾಡಲಾಗಿದೆ ಎಂದು ಮಠಂದೂರು ಹೇಳಿದ್ದಾರೆ. ವೈರಲ್ ಆಗಿರುವ ಫೋಟೋ ಬಗ್ಗೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಫೋಟೊಗಳನ್ನು ವೈರಲ್ ಮಾಡುತ್ತಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಚುನಾವಣೆಯ ಸಂದರ್ಭದಲ್ಲಿಯೇ ಈ ಫೋಟೋ ವೈರಲ್ ಆಗಿರುವುದು ಸಂಜೀವ ಮಠಂದೂರು ಅವರ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಅವರ ವಿರೋಧಿಗಳೇ ಈ ಕೃತ್ಯ ಎಸಗಿದ್ದಾರೆನ್ನಲಾಗಿದೆ.