ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಿನ್ನೆಲೆ: ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್‌ ಭದ್ರತೆ

ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಹಿನ್ನೆಲೆ: ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್‌ ಭದ್ರತೆ

ಬೆಂಗಳೂರು: ಈ ಬಾರಿಯ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ಮೊದಲೇ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿದೆ.

ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಯಲ್ಲಿ ಸರಣಿ ಸಭೆ ನಡೆಸುತ್ತಿರುವ ಹೈಕಮಾಂಡ್‌ ನಾಯಕರು ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಸಿದ್ದಪಡಿಸಿದ್ದು, ಇಂದು ಸಂಜೆ ಮೊದಲ ಪಟ್ಟಿ ಬಿಡುಗಡೆಯಾಗಲಿದೆ.  

ಈ ಬಾರಿಯ ಚುನಾವಣೆಗೆ ಸಿದ್ಧಪಡಿಸಲಾಗಿರುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಹಲವಾರು ಹಾಲಿ ಶಾಸಕರು ಸೇರಿದಂತೆ ಹಿರಿಯ ನಾಯಕರಿಗೆ ಕೊಕ್‌ ನೀಡಿ, ಹೊಸಬರಿಗೆ ಮಣೆ ಹಾಕಿಗಾಗಿದೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟಿಕೆಟ್‌ ವಂಚಿತ ಶಾಸಕರ, ನಾಯಕರ ಬೆಂಬಲಿಗರು ಪ್ರತಿಭಟನೆ, ಧರಣಿ  ನಡೆಸುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ 100ಕ್ಕೂ ಹೆಚ್ಚು ಪೊಲೀಸರು ಇರುವ 2 KSRP ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಅಭ್ಯರ್ಥಿಗಳ ಆಯ್ಕೆ ಕಗ್ಗಂಟು ಬಿಜೆಪಿಯಲ್ಲಿ ಈ ಬಾರಿ ಹೆಚ್ಚಾಗಿರುವುದರಿಂದ ತೀವ್ರ ಕಸರತ್ತು ನಡೆಸುತ್ತಿರುವ BJP ಇಂದು ತನ್ನ ಮೊದಲ ಪಟ್ಟಿ ಪ್ರಕಟಿಸುತ್ತಿದೆ. 

Ads on article

Advertise in articles 1

advertising articles 2

Advertise under the article