ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯ ಚುನಾವಣಾ ಕಚೇರಿಯಲ್ಲಿ ಉದ್ಘಾಟನೆ

ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯ ಚುನಾವಣಾ ಕಚೇರಿಯಲ್ಲಿ ಉದ್ಘಾಟನೆ

ಕಾಪು(Headlines Kannada): ಭಾರತೀಯ ಜನತಾ ಪಾರ್ಟಿಯ ಕಾಪು ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯಲ್ಲಿ ಶುಕ್ರವಾರ ಗಣಹೋಮವನ್ನು ನೆರವೇರಿಸಿ ಕಚೇರಿಯನ್ನು ಉದ್ಘಾಟಿಸಲಾಯಿತು. 

ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ದೆಹಲಿ ವಿಧಾನಸಭಾ ಶಾಸಕರು ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿ ವಿಜೇಂದರ್ ಗುಪ್ತ, ಶಾಸಕರಾದ  ಲಾಲಾಜಿ ಮೆಂಡನ್, ಬಿಜೆಪಿ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಕ್ಷೇತ್ರದ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಜಿಲ್ಲಾ ಉಪಾಧ್ಯಕ್ಷರುಗಳಾದ  ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಜಿಲ್ಲಾ ಕಾರ್ಯದರ್ಶಿಗುರುಪ್ರಸಾದ್ ಶೆಟ್ಟಿ, ಮಂಗಳೂರು ವಿಭಾಗದ ಪ್ರಭಾರೀಗಳಾದ ಉದಯ್ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್, ಕ್ಷೇತ್ರ ಚುನಾವಣಾ ಉಸ್ತುವಾರಿ  ಸುಲೋಚನಾ ಭಟ್, ಹಿರಿಯರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಶ್ರೀ ಗಂಗಾಧರ್ ಸುವರ್ಣ, ವೀಣಾ ಶೆಟ್ಟಿ,  ಶ್ಯಾಮಲ ಕುಂದರ್, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ ಸುವರ್ಣ,ಶೀಲಾ ಶೆಟ್ಟಿ, ನೀತಾ ಗುರುರಾಜ್, ಶಶಿಪ್ರಭ ಶೆಟ್ಟಿ, ಮಾಲಿನಿ ಶೆಟ್ಟಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

Ads on article

Advertise in articles 1

advertising articles 2

Advertise under the article