ಉಡುಪಿಯ 5 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಿಗೆ ಟಿಕೆಟ್ ಫೈನಲ್: ಉಡುಪಿಗೆ ಯಶ್ ಪಾಲ್, ಕಾಪುಗೆ ಗುರ್ಮೆ ಸುರೇಶ್ ಶೆಟ್ಟಿ, ಕುಂದಾಪುರದಿಂದ ಕಿರಣ್ ಕುಮಾರ್ ಕೊಡ್ಗಿ, ಕಾರ್ಕಳ - ಸುನಿಲ್ ಕುಮಾರ್'ಗೆ ಟಿಕೆಟ್
ಉಡುಪಿ: ಈ ಬಾರಿಯ ವಿಧಾನ ಸಭಾ ಚುನಾವಣೆಗೆ ಉಡುಪಿ ಜಿಲ್ಲೆಯ 5 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳಿಗೆ ಟಿಕೆಟ್ ನೀಡಲಾಗಿದ್ದು, ಅದರಲ್ಲಿ ಮೂರು ಕ್ಷೇತ್ರಗಳಿಗೆ ಹಾಲಿ ಶಾಸಕರನ್ನು ಕೈಬಿಟ್ಟು ಹೊಸಬರಿಗೆ ಟಿಕೆಟ್ ನೀಡಲಾಗಿದೆ.
ಕಾರ್ಕಳ ಕ್ಷೇತ್ರದಿಂದ ಹಾಲಿ ಶಾಸಕ ಸುನಿಲ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದ್ದು, ಉಡುಪಿ ಕ್ಷೇತ್ರದಿಂದ ಹಾಲಿ ಶಾಸಕ ರಘುಪತಿ ಭಟ್ ಅವರನ್ನು ಕೈಬಿಟ್ಟು ಯಶ್ ಪಾಲ್ ಸುವರ್ಣರಿಗೆ ನೀಡಲಾಗಿದೆ.
ಕಾಪು ಕ್ಷೇತ್ರದಲ್ಲಿ ಹಾಲಿ ಶಾಸಕ ಲಾಲಾಜಿ ಆರ್.ಮೆಂಡನ್ ಅವರನ್ನು ಕೈಬಿಟ್ಟು ಸುರೇಶ್ ಶೆಟ್ಟಿ ಗುರ್ಮೆ ಅವರಿಗೆ ಟಿಕೆಟ್ ನೀಡಲಾಗಿದೆ.
ಕುಂದಾಪುರ ಕ್ಷೇತ್ರದಲ್ಲಿ ಈ ಬಾರಿ ಹಾಲಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಚುನಾವಣೆಯಿಂದ ಹಿಂದೆ ಸರಿದಿರುವುದರಿಂದ ಬ್ರಾಹ್ಮಣ ಸಮುದಾಯದ ಕಿರಣ್ ಕುಮಾರ್ ಕೊಡ್ಗಿ ಅವರಿಗೆ ಟಿಕೆಟ್ ಫೈನಲ್ ಆಗಿದೆ.
ಬೈಂದೂರು ಕ್ಷೇತ್ರಕ್ಕೆ ಇನ್ನೂ ಅಭ್ಯರ್ಥಿ ಫೈನಲ್ ಆಗಿಲ್ಲ. ಹಾಲಿ ಶಾಸಕ ಸುಕುಮಾರ್ ಶೆಟ್ಟಿ ಅಥವಾ ಬೇರೆ ಯಾರಿಗೆ ಟಿಕೆಟ್ ನೀಡಲಾಗುತ್ತದೆ ಎಂಬುದನ್ನು ಮುಂದಿನ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಪಷ್ಟವಾಗಲಿದೆ.