ಮೋದಿ, ತನ್ನ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲಎಂದು ಅರಿತುಕೊಂಡ ಬೊಮ್ಮಾಯಿ ಚಿತ್ರನಟರ ಮುಂದೆ ಶರಣಾಗಿದ್ದಾರೆ: ಕಾಂಗ್ರೆಸ್ ಲೇವಡಿ
Wednesday, April 5, 2023
ಬೆಂಗಳೂರು: ಮೋದಿ ಮುಖ ತೋರಿಸಿದರೂ ಓಟು ಗಿಟ್ಟುವುದಿಲ್ಲ, ನನ್ನ ಮುಖ ತೋರಿಸಿದರೂ ಮತ ಬರುವುದಿಲ್ಲ ಎಂದು ಅರಿತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರನಟರ ಮುಂದೆ ಶರಣಾಗಿದ್ದಾರೆ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಬೆಂಗಳೂರಿನ ಖಾಸಗಿ ಹೋಟೆಲೊಂದರಲ್ಲಿ ನಡೆದ ಜಂಟಿ ಸುದ್ದಿಗೊಷ್ಠಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ನಟ ಕಿಚ್ಚ ಸುದೀಪ್, ತಾನು ಈ ಬಾರಿ ಬೊಮ್ಮಾಯಿ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ ಬೆನ್ನಲ್ಲೇ ಬಿಜೆಪಿ ವಿರುದ್ಧ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಗೆ ತೋರಿಸಲು ರಾಜಕೀಯ ನಾಯಕರಿಲ್ಲದ ಕಾರಣ ಸಿನೆಮಾ ನಾಯಕರ ಮೊರೆ ಹೋಗಿದೆ! BSY ಮುಖವನ್ನು ಮರೆಮಾಚಲು ಮುಂದಾದ ಬಿಜೆಪಿಗೆ ಈಗ ವರ್ಚಸ್ವಿ ನಾಯಕರಿಲ್ಲದಿರುವುದು ದುರಂತ ಎಂದು ಟೀಕೆ ಮಾಡಿದೆ.