ಪ್ರಿಯಕರನ ಬ್ಲ್ಯಾಕ್ ಮೇಲ್'ಗೆ ಹೆದರಿ ವೀಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತ ಮಹಿಳೆ
ವಿಜಯಪುರ: ಪ್ರಿಯಕರನ ಬ್ಲ್ಯಾಕ್ ಮೇಲ್'ಗೆ ನವವಿವಾಹಿತ ಮಹಿಳೆಯೊಬ್ಬರು ಮೊಬೈಲ್ ವಿಡಿಯೋ ಆನ್ ಮಾಡಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಸುಹಾನ್ ಸೋನಾರ್ (21 ವರ್ಷ) ಎಂಬಾಕೆಯೇ ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆಯಾಗಿದ್ದಾಳೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಸುಹಾನ್ ಸೋನಾರ್ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ ಮೇಲ್ ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಕೊಂಡಿದ್ದಾಳೆ.
ನಾನು, ನೀನು ಒತ್ತಿರಗಿರುವ ಫೋಟೋ ನಿನ್ನ ಪತಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ ಮೇಲ್ ಮಾಡಿದ್ದಾನೆ. ಇದರಿಂದ ಹೆದರಿ ಸುಹಾನಾ ಲೈವ್ ವಿಡಿಯೋ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಬಂಧಿಕರು ದೂರಿದ್ದಾರೆ.
ಉಪ್ಪಲದಿನ್ನಿ ಗ್ರಾಮದ ಅಲ್ತಾಫ್ ಸುಲೆಮಾನ್ 1 ವರ್ಷದ ಹಿಂದೆ ಸುಹಾನಾ ಜೊತೆ ಪ್ರೀತಿ ಬೆಳೆಸಿದ್ದ. ಈ ವಿಷಯ ಸುಹಾನಾ ಪೋಷಕರಿಗೆ ಗೊತ್ತಾಗಿ ಹಿರಿಯರ ಸಮ್ಮುಖದಲ್ಲಿ ಅಲ್ತಾಫ್‌ಗೆ ದೂರ ಅಗಯುವಂತೆ ತಾಕೀತು ಮಾಡಿದ್ದರು. ಬಳಿಕ ಸುಹಾನಾ ಹೊಕ್ಕುಂಡಿ ಗ್ರಾಮದ ಷರೀಫ್ ಸೋನಾರ್ ಜೊತೆಗೆ ಇತ್ತೀಚೆಗೆ ಮದುವೆ ಮಾಡಿ ಕೊಟ್ಟಿದ್ದರು.
ಗಂಡನನ್ನು ಬಿಟ್ಟು ನನ್ನೊಂದಿಗೆ ಬಾ, ಇಲ್ಲವಾದರೆ ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಸುಹಾನಾಳಿಗೆ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಬೆಸತ್ತಿದ್ದ ಸುಹಾನಾ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.