
ದುಬೈನ ವಸತಿ ಸಂಕೀರ್ಣ ಕಟ್ಟಡವೊಂದರಲ್ಲಿ ಭಾರೀ ಅಗ್ನಿಅವಘಡ; ನಾಲ್ವರು ಭಾರತೀಯರು ಸೇರಿದಂತೆ 16 ಮಂದಿ ಸಾವು
Sunday, April 16, 2023
ದುಬೈ: ದುಬೈನ ವಸತಿ ಸಂಕೀರ್ಣ ಕಟ್ಟಡವೊಂದರಲ್ಲಿ ಶನಿವಾರ ಮಧ್ಯರಾತ್ರಿ ಭಾರೀ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 4 ಮಂದಿ ಭಾರತೀಯರು ಸೇರಿದಂತೆ ಒಟ್ಟು 16 ಮಂದಿ ಸಾವನ್ನಪ್ಪಿದ್ದಾರೆ.
ದುಬೈನ ದೇರಾ ಅಲ್ ಮುರಾರ್‌ನ ವಸತಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ದುರ್ಘಟನೆಯಲ್ಲಿ ಭಾರತದ ಕೇರಳ ಮೂಲದ ದಂಪತಿಗಳು ಸೇರಿದಂತೆ ಕನಿಷ್ಠ 4 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 16ಕ್ಕೇರಿದೆ. ಈ ದುರ್ಘಟನೆ ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಈ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದ ಕೇರಳದ ದಂಪತಿಗಳು ಹಾಗು ತಮಿಳುನಾಡಿನ ಇಬ್ಬರು ಪುರುಷರು, 3 ಪಾಕಿಸ್ತಾನಿ ಸೋದರಸಂಬಂಧಿಗಳು ಹಾಗು ನೈಜೀರಿಯಾದ ಮಹಿಳೆ ಸೇರಿದಂತೆ ಅಗ್ನಿ ಅವಘಡದಲ್ಲಿ 16 ಮಂದಿ ಬಲಿಯಾಗಿದ್ದಾರೆ.