ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆಎಸ್ ಈಶ್ವರಪ್ಪ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಬರೆದ ಪತ್ರದಲ್ಲಿ ಏನಿದೆ...?

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕೆಎಸ್ ಈಶ್ವರಪ್ಪ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾಗೆ ಬರೆದ ಪತ್ರದಲ್ಲಿ ಏನಿದೆ...?

ಶಿವಮೊಗ್ಗ: ಒಂದೆಡೆ ಈ ಬಾರಿಯ ಚುನಾವಣೆಗೆ ಟಿಕೆಟ್'ಗಾಗಿ ಬಿಜೆಪಿಯಲ್ಲಿ ಪೈಪೋಟಿ ನಡೆಯುತ್ತಿರುವ ಮಧ್ಯೆ ಪಕ್ಷದ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ರಾಜಕೀಯಕ್ಕೆ ನಿವೃತ್ತಿ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಈಶ್ವರಪ್ಪ, ನಾನು ಸ್ವ– ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ, ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದು ಮನವಿ ಮಾಡಿದ್ದಾರೆ.

ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯ ಉಪ–ಮುಖ್ಯಮಂತ್ರಿಯವರೆಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article