ಕಾಂಗ್ರೆಸ್ ಸೇರ್ಪಡೆಗೊಂಡ ಗೀತಾ ಶಿವರಾಜ್ ಕುಮಾರ್
Friday, April 28, 2023
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಗೊಂಡರು.
ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ತತ್ವ ಮತ್ತು ಸಿದ್ಧಾಂತವನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಗೊಂಡಿರುವುದಾಗಿ ಗೀತಾ ಶಿವರಾಜ್ ಕುಮಾರ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಧ್ವಜ ನೀಡುವ ಮೂಲಕ ಗೀತಾ ಶಿವರಾಜ್ ಕುಮಾರ್ ಅವರನ್ನು ಸ್ವಾಗತಿಸಿದರು. ಮಧು ಬಂಗಾರಪ್ಪ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು.