ಬಿರುಸಿನ ಚುನಾವಣಾ ಪ್ರಚಾರ ನಡೆಸಿದ ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ; ಸಾಥ್ ನೀಡಿದ ಲಾಲಾಜಿ-ಪ್ರಮೋದ್ ಮಧ್ವರಾಜ್
ಕಾಪು: ರವಿವಾರ ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಚುನಾವಣೆಯ ಹಿನ್ನೆಲೆಯಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಸಿದ್ದು, 80 ಬಡಗುಬೆಟ್ಟು ವ್ಯಾಪ್ತಿಯ ಪ್ರದೇಶದ ನಿವಾಸಿಗಳನ್ನು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಪಕ್ಷದ ಪ್ರಮುಖರೊಂದಿಗೆ ಮನೆ ಮನೆಗೆ ತೆರಳಿ ಭೇಟಿ ಮಾಡಿ ಮತಯಾಚಿಸಿದರು.
ಬಳಿಕ ಹೆಜಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮತದಾರರನ್ನು ಭೇಟಿಯಾದ ಗುರ್ಮೆ ಸುರೇಶ್ ಶೆಟ್ಟಿ, ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮೇ10 ಕ್ಕೆ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಅಮೂಲ್ಯವಾದ ಮತವನ್ನು ನೀಡಿ ಕಾಪುವಿನ ಸರ್ವಾಂಗಿನ ಅಭಿವೃದ್ಧಿಗಾಗಿ ಹರಸಿ ಮತ್ತೊಮ್ಮೆ ಬಿಜೆಪಿಗೆ ಆಶೀರ್ವದಿಸುವಂತೆ ಮತಯಾಚನೆ ನಡೆಸಿದರು.
ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ 80 ಬಡಗಬೆಟ್ಟು ಪಂಚಾಯತ್ ವ್ಯಾಪ್ತಿಯ ಬೂತ್ ಸಂಖ್ಯೆ 36ರ ಬೂತ್ ಅಧ್ಯಕ್ಷ ಸಂದೀಪ್ ಮರಾಠೆ ಅವರ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜೀ ಅವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಸುರೇಶ್ ಶೆಟ್ಟಿ ಗುರ್ಮೆಯವರು ಕಾರ್ಯಕರ್ತರೊಂದಿಗೆ ವೀಕ್ಷಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ವ್ಯಾಪ್ತಿಯ ಪಕ್ಷದ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು