ಮಂಗಳೂರು ಉತ್ತರದ ಟಿಕೆಟ್ ಗೊಂದಲಕ್ಕೆ ಅಂತಿಮ ತೆರೆ; ಇನಾಯತ್ ಅಲಿಗೆ ಟಿಕೆಟ್ ಅಂತಿಮಗೊಳಿಸಿದ ಕಾಂಗ್ರೆಸ್ ಹೈಕಮಾಂಡ್
Monday, April 3, 2023
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್'ಗೆ ಕಗ್ಗಂಟಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಟಿಕೆಟ್ ಗೊಂದಲಕ್ಕೆ ಅಂತಿಮ ತೆರೆ ಬಿದ್ದಿದೆ.
ಮಾಹಿತಿಯ ಪ್ರಕಾರ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದ ಇನಾಯತ್ ಅಲಿ ಅವರ ಹೆಸರನ್ನು ಹಲವು ಸುತ್ತಿನ ಚರ್ಚೆಗಳ ಬಳಿಕ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದೆ ಎಂದು ಮಾಹಿತಿ ಲಭ್ಯವಾಗಿದೆ.
ಈ ನಡುವೆ ಟಿಕೆಟ್'ಗಾಗಿ ಬಾರಿ ಲಾಬಿ ನಡೆಸಿದ್ದ ಕ್ಷೇತ್ರದ ಮಾಜಿ ಶಾಸಕ ಮೊಹಿದೀನ್ ಬಾವ ಅವರಿಗೆ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಸೂಕ್ತ ಸ್ಥಾನಮಾನ ನೀಡುವುದಾಗಿ ಹೈಕಮಾಂಡ್ ನಾಯಕರು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ದ್ವಿತೀಯ ಪಟ್ಟಿ ಇನ್ನೆರಡು ದಿನಗಳಲ್ಲಿ ಹೊರ ಬೀಳಲಿವೆ ಎಂದು ತಿಳಿದುಬಂದಿದೆ.