ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಮತ ಯಾಚನೆ; ಮಣಿಪಾಲ್ ಮೀಡಿಯಾ ಮುಖ್ಯಸ್ಥರೊಂದಿಗೆ ಮಾತುಕತೆ
Friday, April 28, 2023
ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ರವರು ಶುಕ್ರವಾರ ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್ ನ ವಾಣಿಜ್ಯ ಮುದ್ರಣಾ ವಿಭಾಗದ ಮುಖ್ಯಸ್ಥರನ್ನು ಭೇಟಿಯಾಗಿ ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಣಿಪಾಲ್ ಮೀಡಿಯಾ ನೆಟ್ವರ್ಕ್ ಲಿಮಿಟೆಡ್ ನ ಚೇರ್ಮನ್ ಟಿ. ಸತೀಶ್ ಯು.ಪೈ, ವ್ಯವಸ್ಥಾಪಕ ಮತ್ತು ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ವಿನೋದ್ ಕುಮಾರ್ ಹಾಗೂ ಸಿಬ್ಬಂದಿ ವರ್ಗದೊಂದಿಗೆ ಮಾತುಕತೆ ನಡೆಸಿ, ಮತ ಯಾಚಿಸಿದರು.